ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಯುವಕರಿಂದ ರಕ್ತದಾನ

KannadaprabhaNewsNetwork |  
Published : Sep 18, 2025, 01:10 AM IST
17ಕೆಎಂಎನ್‌ಡಿ-5ಪ್ರಧಾನಮಂತ್ರಿ ನರೇಂದ್ರಮೋದಿ ಹುಟ್ಟುಹಬ್ಬದ ಪ್ರಯುಕ್ತ ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ದಿನವಾಗಿ ಆಚರಿಸಲಾಗುತ್ತಿದೆ. ಇಂದು ಶಿಬಿರವನ್ನು ಉಚಿತವಾಗಿ ಹೆಲ್ಮೆಟ್ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹೀಗೆ ಹತ್ತು ಹಲವು ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು. ರಾಜ್ಯ ಸಭಾ ಸದಸ್ಯ ಲೆಹರ್‌ಸಿಂಗ್ ರಕ್ತದಾನ ಮಾಡಿದ ಯುವಕರಿಗೆ ಹಣ್ಣು ಹಂಪಲು ವಿತರಿಸಿದರು.

ರಾಜ್ಯಸಭಾ ಸದಸ್ಯ ಲೆಹರ್‌ಸಿಂಗ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಅವರ ಹುಟ್ಟುಹಬ್ಬದಂದು ದೇಶದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ದಿನವಾಗಿ ಆಚರಿಸಲಾಗುತ್ತಿದೆ. ಇಂದು ಶಿಬಿರವನ್ನು ಉಚಿತವಾಗಿ ಹೆಲ್ಮೆಟ್ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹೀಗೆ ಹತ್ತು ಹಲವು ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದ ನಾಯಕರಲ್ಲಿ ಅಗ್ರಗಣ್ಯರಾಗಿದ್ದಾರೆ. ಭಾರತದ ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರಸ್ತೆಗಳು, ಜನರ ಜೀವನಮಟ್ಟ ಸುಧಾರಣೆ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ನಾವು ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದರು.

ಸುಮಾರು 75 ಯೂನಿಟ್ ರಕ್ತ ಸಂಗ್ರಹಿಸಿ ಮಿಮ್ಸ್ ರಕ್ತನಿಧಿ ಕೇಂದ್ರಕ್ಕೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್. ಇಂದ್ರೇಶ್, ವೈದ್ಯಕೀಯ ಪ್ರಕೋಷ್ಠ ರಾಜ್ಯ ಸಹ ಸಂಚಾಲಕ ಡಾ.ಸದಾನಂದ, ಮುಖಂಡರಾದ ಫಣೀಶ್, ಧನಂಜಯ, ವಿವೇಕ್, ನಿತ್ಯಾನಂದ, ವಸಂತ್‌ಕುಮಾರ್, ಕೆಂಪಬೋರಯ್ಯ, ಆನಂದ್, ಕೃಷ್ಣ ಅಂಕಪ್ಪ, ಗೊರವಾಲೆ ಶಿವಣ್ಣ, ಚಂದ್ರು, ಶಿವಲಿಂಗಯ್ಯ, ಪ್ರಸನ್ನಕುಮಾರ್, ನವೀನ್, ಮಂಜುನಾಥ್, ಮಹೇಶ್ ಸೇರಿದಂತೆ ಇತರರಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ