ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಯುವ ಆವೃತ್ತಿ ಸಹಕಾರಿ: ಮಲ್ಲಿಕಾರ್ಜುನ ಬೇವಿನಮರದ

KannadaprabhaNewsNetwork | Published : Mar 19, 2024 12:45 AM

ಸಾರಾಂಶ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಕನ್ನಡಪ್ರಭದ ಯುವ ಆವೃತ್ತಿ ಸಹಕಾರಿಯಾಗಿದೆ.

ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ

ಕನ್ನಡಪ್ರಭ ವಾರ್ತೆ ಕನಕಗಿರಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಕನ್ನಡಪ್ರಭದ ಯುವ ಆವೃತ್ತಿ ಸಹಕಾರಿಯಾಗಿದೆ ಎಂದು ವೈದ್ಯ ಡಾ. ಮಲ್ಲಿಕಾರ್ಜುನ ಬೇವಿನಮರದ ಹೇಳಿದರು.

ತಾಲೂಕಿನ ಹಿರೇಖೇಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡಪ್ರಭ ಸತತ ೫೦ ವರ್ಷಗಳಿಂದ ಸಾಮಾಜಿಕ ಪರಿವರ್ತನೆಯಾಗುವ ನಿಟ್ಟಿನಲ್ಲಿ ನಿರಂತರ ಕಾರ್ಯ ಮಾಡುತ್ತಿದೆ. ಅದೇ ರೀತಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿ ಶೈಕ್ಷಣಿಕ ಮಾರ್ಗದರ್ಶಿ ಅತ್ಯುತ್ತಮವಾಗಿ ಮೂಡಿ ಬರುತ್ತಿದ್ದು, ಈ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪಠ್ಯದ ಜತೆಗೆ ಯುವ ಆವೃತ್ತಿಯನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಜಿಲ್ಲೆಗೆ ಕೀರ್ತಿ ತರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕು ಸಹಾಯಕ ಕ್ರೀಡಾಧಿಕಾರಿ ತಿಪ್ಪಣ್ಣ ಮಾತನಾಡಿ, ಕನ್ನಡಪ್ರಭದ ಯುವ ಆವೃತ್ತಿ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ರಾಜಕೀಯ, ಕಲೆ, ಸಾಹಿತ್ಯ, ಸಂಗೀತ ಕ್ಷೇತ್ರದ ಮಾಹಿತಿ ನೀಡುವ ಜತೆಗೆ ಶೈಕ್ಷಣಿಕ ಮಾರ್ಗದರ್ಶಿಯಾಗಿದೆ. ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಸ್ಪೂರ್ತಿಯಾಗಿದ್ದು, ಪತ್ರಿಕೆಯ ನಿರಂತರ ಅಧ್ಯಯನದಿಂದ ಮಕ್ಕಳು ಶಾಲೆಗೆ ಒಳ್ಳೆ ಫಲಿತಾಂಶ ತರಲಿದ್ದಾರೆ ಎಂದರು.

ಕನ್ನಡಪ್ರಭದ ಯುವ ಆವೃತ್ತಿ ನಮಗೆಲ್ಲ ಸಹಕಾರಿಯಾಗಿದೆ. ರಾಜ್ಯದ ನಾನಾ ಕಡೆಗಳಲ್ಲಿನ ನಡೆದ ವೈವಿಧ್ಯಮಯ ಕಾರ್ಯಕ್ರಮಗಳ ಜತೆಗೆ ಪ್ರಶಸ್ತಿ ಪಡೆದಿರುವ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವವರ ಕುರಿತು ಪತ್ರಿಕೆಯಲ್ಲಿ ಸುದ್ದಿ ಪ್ರಕಟಿಸಿ ಬೆಳಕಿಗೆ ತರುತ್ತಿದೆ. ಹಳ್ಳಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಯುವ ಆವೃತ್ತಿ ಹೆಸರಾಗಿದೆ. ಈ ಬಾರಿ ಪರೀಕ್ಷೆಗೆ ಯುವ ಆವೃತ್ತಿ ಅನುಕೂಲವಾಗಲಿದೆ ಎನ್ನುವ ವಿಶ್ವಾಸ ಹೊಂದಿದ್ದೇವೆ ಎಂದು ನಿತ್ಯ ಆವೃತ್ತಿ ಓದುವ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು.

ಈಶ್ವರಗೌಡ ಶೀಲವಂತರ, ಇಮಾಮಸಾಬ ಕಲಾದಗಿ, ಪ್ರತಿಭಾ ಮಣ್ಣೂರು, ಅಣ್ಣಪ್ಪ, ಜಾಕೀರ, ವಸಂತಗೌಡ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

Share this article