ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಯುವ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿ ದಿಸೆ ಮುಗಿದ ನಂತರ ಯುವ ಸಮುದಾಯ ಕೆಲಸಕ್ಕೆ ಸೇರಿದ ನಂತರ ಲಂಚವನ್ನು ಪೂರ್ಣ ಪ್ರಮಾಣದಲ್ಲಿ ನಿರ್ನಾಮ ಮಾಡಲು ಆಗದಿದ್ದರೂ ಸಹ ಅದನ್ನು ವಿರೋಧಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ ತಮ್ಮ ಶೈಕ್ಷಣಿಕ ಜೀವನದಲ್ಲಿ ಏಕಾಗ್ರತೆ ಬೆಳೆಸಿಕೊಳ್ಳಬೇಕು. ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಯುವಶಕ್ತಿ ದೇಶದ ಉನ್ನತಿಗೆ ಶ್ರಮಿಸಿದರೆ ನಮ್ಮ ರಾಷ್ಟ್ರ ಮತ್ತಷ್ಟು ಉತ್ತುಂಗಕ್ಕೇರುತ್ತದೆ ಎಂದರು.ವಿದ್ಯಾರ್ಥಿ ದಿಸೆ ಮುಗಿದ ನಂತರ ಯುವ ಸಮುದಾಯ ಪ್ರಾಮಾಣಿಕರಾಗಿರಬೇಕು. ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಲಂಚವನ್ನು ಪೂರ್ಣ ಪ್ರಮಾಣದಲ್ಲಿ ನಿರ್ನಾಮ ಮಾಡಲು ಆಗದಿದ್ದರೂ ಸಹ ಅದನ್ನು ವಿರೋಧಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಹಿರಿಯ ಪತ್ರಕರ್ತ ಸುದರ್ಶನ್ ಚನ್ನಂಗಿಹಳ್ಳಿ ಮಾತನಾಡಿ, ಯುವಶಕ್ತಿಗೆ ಅಣು ಬಾಂಬ್‌ಗಿಂತಲೂ ಹೆಚ್ಚು ಶಕ್ತಿಯಿದೆ. ಅಂತಹ ಯುವಶಕ್ತಿ ಮನಸ್ಸು ಮಾಡಿದರೆ ಯಾವುದೇ ಸಾಧನೆ ಮಾಡಬಹುದು. ಆದರೆ, ಸಮಾಜದಲ್ಲಿ ಅಂತಹ ಯುವಶಕ್ತಿಯನ್ನು ದುರ್ಬಳಕೆ ಮಾಡುವ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಆ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಕ್ಕರೆ ಇನ್ನೂ ಹೆಮ್ಮರವಾಗಿ ಬೆಳೆಯಲು ಅವಕಾಶವಿರುತ್ತದೆ ಎಂದರು.
ಭೈರವೈಕ್ಯ ಬಾಲಗಂಗಾಧರನಾಥಶ್ರೀಗಳ ಪರಿಶ್ರಮದಿಂದ ಅನ್ನ, ಅಕ್ಷರ ಆರೋಗ್ಯ ದಾಸೋಹಕ್ಕೆ ಹೆಸರಾಗಿರುವ ಆದಿಚುಂಚನಗಿರಿ ಮಠ ದೇಶ ವಿದೇಶಗಳಲ್ಲಿಯೂ ಪ್ರಸಿದ್ಧಿ ಪಡೆದು ಬಹುದೊಡ್ಡ ಹೆಮ್ಮರವಾಗಿ ಬೆಳೆಯುತ್ತಿದೆ. ಒಂದು ಮಠ ಸಮಾಜ ಕಟ್ಟುವ ಕೆಲಸದಲ್ಲಿ ಹೇಗೆ ತೊಡಗಿಸಿಕೊಳ್ಳುತ್ತದೆ ಎಂಬುದಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯುವ ಅನೇಕ ಕಾರ್ಯಕ್ರಮಗಳೇ ಸಾಕ್ಷಿ ಎಂದು ಬಣ್ಣಿಸಿದರು.
ಪರಿಸರದ ಅಸಮತೋಲನದ ಕಾರಣದಿಂದಾಗಿ ಕೃಷಿಕರಿಗೆ ಮತ್ತು ದೇಶಕ್ಕೆ ಆಗಿರುವ ತೊಂದರೆಯನ್ನು ಮನಗಂಡು ರಾಜ್ಯದಲ್ಲಿ 5 ಕೋಟಿ ಸಸಿಗಳನ್ನು ನೆಡುವಂತಹ ತೀರ್ಮಾನ ಮಾಡಿದ ಮೊದಲ ಧಾರ್ಮಿಕ ಗುರು ಯಾರಾದರೂ ಇದ್ದರೆ ಅದು ಬಾಲಗಂಗಾಧರನಾಥಶ್ರೀಗಳು ಮಾತ್ರ ಎಂದರು.