ಬೆಂಗಳೂರಲ್ಲಿ ಏ.20ಕ್ಕೆ ‘ಯುವೋತ್ಸವ-ಉದ್ಯೋಗ ಮೇಳ-2026’

KannadaprabhaNewsNetwork |  
Published : Apr 12, 2026, 02:00 AM IST
Dr.C.N.Ashwathanarayana | Kannada Prabha

ಸಾರಾಂಶ

ಬಸವ ಜಯಂತಿ ಪ್ರಯುಕ್ತ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಷನ್ ಸಹಯೋಗದಲ್ಲಿ ಏ.20ರಂದು ‘ಯುವೋತ್ಸವ- ಉದ್ಯೋಗ ಮೇಳ 2026’ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಸವ ಜಯಂತಿ ಪ್ರಯುಕ್ತ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಷನ್ ಸಹಯೋಗದಲ್ಲಿ ಏ.20ರಂದು ‘ಯುವೋತ್ಸವ- ಉದ್ಯೋಗ ಮೇಳ 2026’ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8.30ರಿಂದ ಸಂಜೆ 4.30ರ ವರೆಗೆ ಮಲ್ಲೇಶ್ವರದ ಎಸ್‍ಎಚ್‍ವಿಎನ್‍ಎಂ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ಆವರಣದಲ್ಲಿ ಈ ಉದ್ಯೋಗ ಮೇಳ ಜರುಗಲಿದೆ. ಕಾಯಕವೇ ಕೈಲಾಸ ಎಂಬ ತತ್ವವನ್ನು ಜಗತ್ತಿಗೆ ನೀಡಿದ ಭಕ್ತಿ ಭಂಡಾರಿ ಬಸವಣ್ಣರನ್ನು ನಾವು ಪೂಜಿಸಿ, ಆರಾಧಿಸುತ್ತೇವೆ. ಹೀಗಾಗಿ ಅವರ ಜಯಂತಿ ಪ್ರಯುಕ್ತ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಹೇಳಿದರು.

ಮಲ್ಲೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಉದ್ಯೋಗ ಮೇಳ ಆಯೋಜಿಸುತ್ತಾ ಬಂದಿದ್ದೇವೆ. ಇದರಿಂದ ಸಾಕಷ್ಟು ಉದ್ಯೋಗಾಕಾಂಕ್ಷಿಗಳಿಗೆ ಸಹಾಯವಾಗಿದೆ. ಈ ಬಾರಿ ‘ಸರ್ವರಿಗೂ ಉದ್ಯೋಗ’ ಎಂಬ ಧ್ಯೇಯವಾಕ್ಯದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಈ ಮೇಳಕ್ಕೆ ಭಾರತ್ ಕರಿಯರ್ ಕನೆಕ್ಟ್ ಕೈ ಜೋಡಿಸಿದೆ ಎಂದರು.100ಕ್ಕೂ ಹೆಚ್ಚು ಕಂಪನಿ ಭಾಗಿ:

ಯುವ ಸಬಲೀಕರಣಕ್ಕೆ ಸಹಾಯವಾಗಬಲ್ಲ ವೃತ್ತಿ ಮಾರ್ಗದರ್ಶನ, ಕೌಶಲ್ಯ ಅಭಿವೃದ್ಧಿ ತರಬೇತಿ, ಉದ್ಯೋಗ ಮೇಳ, ಉದ್ಯಮಶೀಲತಾ ಅಭಿವೃದ್ಧಿ ಮತ್ತು ಆರ್ಥಿಕ ಸೇರ್ಪಡೆ ಇವುಗಳ ಕುರಿತು ಮಾಹಿತಿ ನೀಡಲಾಗುವುದು. ಉದ್ಯೋಗಾಕಾಂಕ್ಷಿಗಳಿಗೆ ಅಗತ್ಯವಾದ ನೇರ ಸಂವಾದ, ನೇಮಕಾತಿ, ವೃತ್ತಿ ಅನ್ವೇಷಣೆಗೆ ಸಾಮಾನ್ಯ ವೇದಿಕೆಯನ್ನು ಈ ಮೇಳ ಒದಗಿಸಲಿದೆ. ಐಟಿ, ಉತ್ಪಾದನೆ, ಬ್ಯಾಂಕಿಂಗ್, ಆರೋಗ್ಯ, ಚಿಲ್ಲರೆ ವ್ಯಾಪಾರ, ಲಾಜಿಸ್ಟಿಕ್ ಮತ್ತು ಸೇವಾ ಕ್ಷೇತ್ರಗಳ ಸುಮಾರು 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಈ ಮೇಳ ಸುಮಾರು 5 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳಿಗೆ ವೇದಿಕೆ ಒದಗಿಸಲಿದೆ ಎಂದು ಹೇಳಿದರು.

ಪಿಯುಸಿಯಿಂದ ಸ್ನಾತಕೋತ್ತರ ಪದವಿ:

ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿದವರು, ಸದ್ಯ ಈ ಕೋರ್ಸ್ ಮಾಡುತ್ತಿರುವವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಕನಿಷ್ಠ ಸಾವಿರ ಆಕಾಂಕ್ಷಿಗಳಿಗೆ ಕೌಶಲ್ಯ ಅಭಿವೃದ್ಧಿ, ಕೌಶಲ್ಯ ಉನ್ನತೀಕರಣ, ಪ್ರಶಿಕ್ಷಣ, ಸ್ವಯಂ ಉದ್ಯೋಗ, ಉದ್ಯಮಶೀಲತೆ, ಜೀವನೋಪಾಯ ಮತ್ತು ಇತರ ಕ್ಷೇತ್ರಗಳಲ್ಲಿ ಯುವಕರಿಗೆ ಅನುಕೂಲ ಒದಗಿಸುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ ಎಂದರು.

ಈ ಮೇಳದಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದವರು ಮಾತ್ರವಲ್ಲದೇ ಎಲ್ಲಾ ಕಡೆಯವರು ಭಾಗವಹಿಸಬಹುದು. ಮೇಳದಲ್ಲಿ ಭಾಗಿಯಾಗುವ ಉದ್ಯೋಗಾಕಾಂಕ್ಷಿಗಳಿಗೆ ಉಟೋಪಚಾರ ಸೇರಿ ಎಲ್ಲಾ ಸೌಲಭ್ಯ ಕಲ್ಪಿಸುವುದಾಗಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರ ಕರ್ತವ್ಯ ವಿಶ್ರಾಂತಿ ರಹಿತವಾದದ್ದು: ಅಂಬರೀಷ್
ಪಠ್ಯ ಶಿಕ್ಷಣದ ಜೊತೆಗೆ ಜೀವನದ ಮೌಲ್ಯ ಕಲಿಕೆ: ಫಾ.ಬೆನ್ನಿ ಮ್ಯಾಥ್ಯೂ