ಕೆ.ಆರ್.ಪೇಟೆ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ತಾಲೂಕಿನ ರಾಯಸಮುದ್ರ ಗ್ರಾಮದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಚಂದ್ರು ಅವರ ಪುತ್ರ ಪೂರ್ಣಚಂದ್ರ(26) ಮೃತ ಯುವಕ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಪೂರ್ಣಚಂದ್ರ ಆರ್ ಸಿಬಿ ಅಭಿಮಾನಿಯಾಗಿದ್ದರು.
ಶಾಸಕರಿಂದ ಸಂತಾಪ:
ಬೆಂಗಳೂರಿನಲ್ಲಿ ಆರ್ ಸಿ ಬಿ ವಿಜಯೋತ್ಸವದದ ವೇಳೆ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತದಿಂದ ಮೃತಪಟ್ಟ ಪೂರ್ಣಚಂದ್ರನಿಗೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಸಂತಾಪ ಸೂಚಿಸಿದ್ದಾರೆ. ನನ್ನ ವಿಧಾನಸಭಾ ಕ್ಷೇತ್ರ ರಾಯಸಮುದ್ರ ಗ್ರಾಮದ ಯುವಕ ಘಟನೆಯಲ್ಲಿ ಸಾವನ್ನಪ್ಪಿರುವುದರಿಂದ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧ ಜೀವ ಬಲಿಯಾಗಿರುವುದು ನನಗೆ ಅತೀವ ದುಃಖ ತಂದಿದೆ. ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ತುರ್ತುಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.