ಯುವಕರ ಉಜ್ವಲ ಭವಿಷ್ಯಕ್ಕಾಗಿಯೇ ಯುವನಿಧಿ ಯೋಜನೆ ಜಾರಿ: ರವೀಂದ್ರ

KannadaprabhaNewsNetwork |  
Published : Oct 22, 2024, 01:24 AM IST
ಕ್ಯಾಪ್ಷನಃ19ಕೆಡಿವಿಜಿ32ಃದಾವಣಗೆರೆ ಡಿಆರ್‌ಆರ್ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನಡೆದ ಯುವ ನಿಧಿ ಯೋಜನೆಯ ಅರಿವು ಕಾರ್ಯಕ್ರಮವನ್ನು ಡಿ.ರವೀಂದ್ರ ಉದ್ಘಾಟಿಸಿದರು. | Kannada Prabha

ಸಾರಾಂಶ

ಯುವಕರ ಉಜ್ವಲ ಭವಿಷ್ಯಕ್ಕಾಗಿಯೇ ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯು ವಿದ್ಯಾವಂತ ಯುವಕರಿಗೆ ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ಪ್ರಯೋಜನ ನೀಡುವ ಗುರಿ ಹೊಂದಿದೆ. ಆದ್ದರಿಂದ ಯುವಜನರು ತಮ್ಮ ಹಣಕಾಸಿನ ಅಗತ್ಯತೆಗಳಿಗಾಗಿ ಯಾರನ್ನೂ ಅವಲಂಬಿಸುವ ಅಗತ್ಯವಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಡಿ.ರವೀಂದ್ರ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಡಿಆರ್‌ಆರ್ ಪಾಲಿಟೆಕ್ನಿಕ್‌ನಲ್ಲಿ ಯುವನಿಧಿ ಯೋಜನೆ ಅರಿವು ಕಾರ್ಯಕ್ರಮ- - - ಕನ್ನಡಪ್ರಭ ವಾರ್ತೆ ದಾವಣಗೆರೆ ಯುವಕರ ಉಜ್ವಲ ಭವಿಷ್ಯಕ್ಕಾಗಿಯೇ ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯು ವಿದ್ಯಾವಂತ ಯುವಕರಿಗೆ ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ಪ್ರಯೋಜನ ನೀಡುವ ಗುರಿ ಹೊಂದಿದೆ. ಆದ್ದರಿಂದ ಯುವಜನರು ತಮ್ಮ ಹಣಕಾಸಿನ ಅಗತ್ಯತೆಗಳಿಗಾಗಿ ಯಾರನ್ನೂ ಅವಲಂಬಿಸುವ ಅಗತ್ಯವಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಡಿ.ರವೀಂದ್ರ ಹೇಳಿದರು.

ನಗರದ ಡಿಆರ್‌ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಕರ್ನಾಟಕ ಸರ್ಕಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ ನಡೆದ ಯುವನಿಧಿ ಯೋಜನೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನೇರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮೂಲಕ ಮಾಸಿಕ ಧನಸಹಾಯ ತಲುಪಿಸಲಾಗುತ್ತಿದೆ. ಜೊತೆಗೆ ಯುವನಿಧಿ ಯೋಜನೆಯ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಿ, ಅದರ ಉದ್ದೇಶ- ಪ್ರಯೋಜನಗಳ ತಿಳಿಸಲಾಗುತ್ತಿದೆ ಎಂದರು.

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಎಚ್.ಜೆ. ಮೈನುದ್ದೀನ್ ಮಾತನಾಡಿ, ವಿದ್ಯಾರ್ಥಿಗಳ ಕುರಿತಂತೆ ಆಗ ತಾನೇ ಡಿಪ್ಲೊಮಾ/ ಪದವಿ ಪೂರೈಸಿಕೊಂಡು ಉದ್ಯೋಗ ಸಿಗಲಾರದೇ ಸಂದರ್ಶನಗಳಿಗೆ ಹಾಜರಾಗಲು ಹಣಕಾಸಿನ ತೊಂದರೆಗಳನ್ನು ನಾವೂ ಅನುಭವಿಸಿದ್ದೇವೆ. ಅಂತಹ ಸಮಸ್ಯೆಗಳನ್ನು ಬದಿಗೊತ್ತಿ ಸರಿಯಾದ ಸಮಯಕ್ಕೆ ಸೂಕ್ತವಾದ ಕೆಲಸ ಪಡೆದುಕೊಳ್ಳುವುದು ಉತ್ತಮ ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಸಿ.ಆರ್. ವಿಶ್ವೇಶ್ವರ ಮಾತನಾಡಿ, ದಾವಣಗೆರೆಯಲ್ಲಿ ಮೊದಲ ಬಾರಿಗೆ ಯುವನಿಧಿ ಅರಿವು ಕಾರ್ಯಕ್ರಮ ಆಯೋಜಿಸಿರುವುದು ತುಂಬಾ ಸಂತಸದ ವಿಚಾರ. ಅದು ನಮ್ಮ ವಿದ್ಯಾರ್ಥಿಗಳಿಗೆ ಸಿಕ್ಕಿರುವುದು ಸೌಭಾಗ್ಯ. ಈ ಯೋಜನೆ ಸಮರ್ಪಕವಾಗಿ ಸದುಪಯೋಗವಾದರೆ ಕಾರ್ಯಕ್ರಮ ಆಯೋಜಿಸಿದ್ದು ಅರ್ಥಪೂರ್ಣವಾಗಲಿದೆ ಎಂದರು.

ಈ ಸಂದರ್ಭ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಎಸ್.ಎಸ್. ಗಿರೀಶ, ಶಿವಶಂಕರ ಕೈದಾಳೆ, ಉದ್ಯೋಗ ಅಭಿವೃದ್ಧಿ ನಿರ್ವಾಹಕ ಸಂದೀಪ್, ಸಮಾಲೋಚಕ ಮಲ್ಲಿಕಾರ್ಜುನ, ರಾಘವೇಂದ್ರ ಗೌಡ, ಉಪನ್ಯಾಸಕ ಉಮೇಶ, ವಿದ್ಯಾರ್ಥಿಗಳು, ಇತರರು ಇದ್ದರು.

- - - -19ಕೆಡಿವಿಜಿ32ಃ:

ದಾವಣಗೆರೆ ಡಿಆರ್‌ಆರ್ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನಡೆದ ಯುವನಿಧಿ ಯೋಜನೆ ಅರಿವು ಕಾರ್ಯಕ್ರಮವನ್ನು ಉದ್ಯೋಗಾಧಿಕಾರಿ ಡಿ.ರವೀಂದ್ರ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ