ಧಾರವಾಡ:
ಇಲ್ಲಿಯ ಆಲೂರ ವೆಂಕಟರಾವ್ ಸಭಾಭವನದಲ್ಲಿ ಗುರುವಾರ ನಡೆದ 12ನೇ ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಅವರು, ಇತ್ತೀಚಿನ ವರ್ಷಗಳಲ್ಲಿ ಯುವ ಸಮುದಾಯ ಸಾಹಿತ್ಯದಿಂದ ದೂರ ಸರಿಯುತ್ತಿದ್ದು, ಸಾಹಿತ್ಯ ಬಡವಾಗುತ್ತಿದೆ. ಆದ್ದರಿಂದ ಯುವ ಜನಾಂಗ ಹೆಚ್ಚು ಸಾಹಿತ್ಯದ ಕಡೆಗೆ ಗಮನ ಹರಿಸಬೇಕಿದೆ. ಇದಕ್ಕಾಗಿ ಹೆಚ್ಚೆಚ್ಚು ಓದುವ ಅಭ್ಯಾಸ ರೂಢಿಸಿಕೊಳ್ಳಿ ಎಂಬ ಸಲಹೆ ನೀಡಿದರು.
ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಹೆಚ್ಚೆಚ್ಚು ಹಮ್ಮಿಕೊಂಡು ಸಾಹಿತ್ಯದ ಬಗ್ಗೆ ಅರಿವು ಉಂಟು ಮಾಡಬೇಕಾಗಿದೆ. ಒಳ್ಳೆಯ ನಾಗರಿಕರಾಗಲು ಸಾಹಿತ್ಯ ಅಧ್ಯಯನ ನಡೆಸಬೇಕು. ಕನ್ನಡ ಬೆಳವಣಿಗೆಗೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ನುಡಿದರು. ರಾಮಚಂದ್ರ ಕುಲಕರ್ಣಿಯವರ "ಅನುಭೂತ ಅನವರತ "ಪುಸ್ತಕವನ್ನು ಬಿಡುಗಡೆಗೊಳಿಸಿದ ಮೇಯರ್ ಜ್ಯೋತಿ ಪಾಟೀಲ, ಕನ್ನಡದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು. ಹಾಗೆಯೇ ಅಭಿಮಾನ ಇರಬೇಕು. ಕನ್ನಡ ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಡಾ. ಎ.ಎಂ. ಖಾನ್, ಧಾರವಾಡ ಸಾಹಿತಿಗಳ ತವರೂರು. ಇಲ್ಲಿ ಕರ್ನಾಟಕದ ಅರ್ಧದಷ್ಟು ಸಾಹಿತಿ, ಕವಿ ಹಾಗೂ ಕಲಾವಿದರಿದ್ದಾರೆ. ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡವು ಹಿತಕರ, ರೋಮಾಂಚನ ಭಾಷೆಯಾಗಿದೆ. ಯುವ ಜನಾಂಗ ಇಂಗ್ಲಿಷ್ ಬೆನ್ನು ಬೀಳದೇ ಮಾತೃ ಭಾಷೆಯತ್ತ ಸಹ ಒಲವು ತೋರಬೇಕಿದೆ ಎಂದು ಹೇಳಿದರು.
ಸಮ್ಮೇಳನಾಧ್ಯಕ್ಷ ಡಾ. ಚಂದ್ರಶೇಖರ ರೊಟ್ಟಿಗವಾಡ, ಡಾ. ರಂಜಾನ ದರ್ಗಾ, ಡಾ. ಬಾಳಣ್ಣ ಶೀಗಿಹಳ್ಳಿ, ಡಾ. ಶ್ರೀನಿವಾಸ ವಾಡಪ್ಪಿ, ಡಾ. ಎಸ್.ಎಸ್. ಅಂಗಡಿ, ಪ್ರೊ. ಕೆ.ಎಸ್. ಕೌಜಲಗಿ ಇದ್ದರು. ಮಹಾಂತೇಶ ನರೇಗಲ್ಲ ಸ್ವಾಗತಿಸಿದರು. ಮೇಘಾ ಹುಕ್ಕೇರಿ ನಿರೂಪಿಸಿದರು. ಪ್ರಮೀಳಾ ಜಕಣ್ಣವರ ನಿರ್ವಹಿಸಿದರು. ಮರ್ತಾಂಡಪ್ಪ ಕತ್ತಿ ವಂದಿಸಿದರು.ಗಮನ ಸೆಳೆದ ಮೆರವಣಿಗೆ