ಯುವಸಂಸತ್‌: ಮಳೆ ಕೊರತೆ, ವನ್ಯಜೀವಿ ಮಾನವ ಸಂಘರ್ಷ ಚರ್ಚೆ

KannadaprabhaNewsNetwork |  
Published : Nov 01, 2026, 04:00 AM IST
ಚಿತ್ರ :  29ಎಂಡಿಕೆ3 : ಯುವ ಸಂಸತ್ತು’ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆ, ಮಾನವ ಮತ್ತು ವನ್ಯ ಪ್ರಾಣಿ ಸಂಘರ್ಷ ತಡೆ, ಪ್ರವಾಸೋದ್ಯಮದಿಂದ ಉದ್ಯೋಗ ಸೃಷ್ಟಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಕಲ್ಪಿಸುವುದು, ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ವಿಚಾರಗಳು ಯುವ ಸಂಸತ್’ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಯಿತು.

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆ, ಮಾನವ ಮತ್ತು ವನ್ಯ ಪ್ರಾಣಿ ಸಂಘರ್ಷ ತಡೆ, ಪ್ರವಾಸೋದ್ಯಮದಿಂದ ಉದ್ಯೋಗ ಸೃಷ್ಟಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಕಲ್ಪಿಸುವುದು, ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ವಿಚಾರಗಳು ಯುವ ಸಂಸತ್’ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಯಿತು.

ಜಿ.ಪಂ.ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮದಲ್ಲಿ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿಯ ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಕೊಡಗು ಜಿಲ್ಲೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಬೆಳಕು ಚೆಲ್ಲಿದರು.

ಸಭೆಯ ಆರಂಭದಲ್ಲಿ ಸಭಾಧ್ಯಕ್ಷರನ್ನು ಮುಖ್ಯಮಂತ್ರಿಯವರು ಮತ್ತು ಪ್ರತಿಪಕ್ಷದ ನಾಯಕರು ಸಭಾಧ್ಯಕ್ಷ ಸ್ಥಾನದ ಪೀಠಕ್ಕೆ ಕರೆದುಕೊಂಡು ಬರುವುದರಿಂದ ಆರಂಭವಾಯಿತು. ಸಭಾಧ್ಯಕ್ಷರು ತಮ್ಮ ಆಸನದಲ್ಲಿ ಕುಳಿತು ಯುವ ಸಂಸತ್ ನಡೆಸಲು ಅನುವು ಮಾಡಿದರು. ನಾಡಗೀತೆ, ವಂದೇಮಾತರಂ ಗೀತೆ ಹಾಡುವ ಮೂಲಕ ಯುವ ಸಂಸತ್ ಆರಂಭವಾಯಿತು. ನಂತರ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಓದಲಾಯಿತು. ಸಭಾಧ್ಯಕ್ಷರ ಪಾತ್ರ ನಿರ್ವಹಿಸಿದ ಮುತ್ತಪ್ಪ ಪ್ರಜಾಪ್ರಭುತ್ವದ ಶಕ್ತಿ ಜನರ ಧ್ವನಿಯಾಗಿದ್ದು, ಜನರ ಸಮಸ್ಯೆಯನ್ನು ಪರಿಹರಿಸುವುದು ಎಲ್ಲರ ಆಶಯವಾಗಿದೆ. ಅದರಂತೆ ಸಮಾಜಮುಖಿಯಾಗಿ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ಕೋರಿದರು.ಮುಖ್ಯಮಂತ್ರಿ ಪಾತ್ರ ನಿರ್ವಹಿಸಿದ ಪ್ರಭಾಕರ್ ಅವರು ಸಚಿವರನ್ನು ಪರಿಚಯಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂತಾಪ ಸೂಚನೆ ನಡೆಯಿತು. ಹಾಗೆಯೇ ಇತ್ತೀಚಿಗೆ ನಿಧನರಾದ ಗಣ್ಯರ ಕುರಿತು ಸ್ಮರಣೆ ನಡೆಯಿತು.ರಸ್ತೆ ಸಿಗ್ನಲ್‌ ಬೇಕು: ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು, ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು, ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಬೇಕು, ಜಿಲ್ಲೆಯ ಹಲವು ರಸ್ತೆಗಳಲ್ಲಿ ಸಂಕೇತ(ಸಿಗ್ನಲ್) ಹಾಗೂ ವಾಹನ ನಿಲುಗಡೆಗೆ ಇಲ್ಲದೆ ತೊಂದರೆಯಾಗಿದೆ. ಇದರಿಂದ ಅಪಘಾತ ಸಹ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕೆಂದು ವಿರೋಧ ಪಕ್ಷದವರು ಬೆಳಕು ಚೆಲ್ಲಿದರು.

ಪ್ರಶ್ನೋತ್ತರ ವೇಳೆ ಗಮನ ಸೆಳೆಯುವ ಸೂಚನೆ, ತುರ್ತು ವಿಷಯದ ಮೇಲಿನ ಚರ್ಚೆ, ವಿಧೇಯಕಗಳ ಮಂಡಣೆ, ವಿಧೇಯಕ ಮೇಲಿನ ಚರ್ಚೆ, ವಿಧೇಯಕಗಳ ಅಂಗೀಕಾರ ಹೀಗೆ ಯುವ ಸಂಸತ್ ನಲ್ಲಿ ಕಾರ್ಯವಿಧಾನಗಳು ನಡೆದವು. ಯುವ ಸಂಸತ್‌ನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ನಿರ್ವಹಿಸಿದರು.

ಯುವ ಸಂಸತ್‌ಗೆ ಚಾಲನೆ ನೀಡಿ ಮಾತನಾಡಿದ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್ ಅವರು ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿ ಎಂದರು.

ತಹಸೀಲ್ದಾರ್‌ರಾದ ಶ್ರೀಧರ, ತಾ.ಪಂ.ಇಒ ಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮಿಲನ ಭರತ್, ನಿವೃತ್ತ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಅಧಿಕಾರಿಗಳು, ಶಿಕ್ಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ