ನಾಯಕತ್ವ ಬೆಳವಣಿಗೆಗೆ ಯುವ ಸಂಸತ್‌ ಸಹಕಾರಿ

KannadaprabhaNewsNetwork |  
Published : Oct 30, 2026, 02:45 AM IST
ಹೂವಿನಹಡಗಲಿಯ ತಾಲೂಕ ಆಡಳಿತ, ಸಮಾಜ ಕಲ್ಯಾಣ ಇಲಾಖೆ, ತಾಲೂಕ ಕಾನೂನು ಸೇವೆ ಸಹಯೋಗದಲ್ಲಿ ಜರುಗಿದ ಯುವ ಸಂಸತ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸರ್ಕಾರಿ ಸಹಾಯಕ ಅಭಿಯೋಜಕ ಅಜ್ಜಯ್ಯ ಚಾಲನೆ ನೀಡಿದರು.ಸಂಸತ್‌ನಲ್ಲಿ ಭಾಗವಹಿಸಿದ ವಿವಿಧ ಶಾಲಾ ಕಾಲೇಜು ಗಳ ವಿದ್ಯಾರ್ಥಿಗಳು... | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ಸಂವಿಧಾನದ ಮೌಲ್ಯ, ನಾಯಕತ್ವ ಗುಣ ಹಾಗೂ ಸಾರ್ವಜನಿಕ ಸಮಸ್ಯೆ ವಿಶ್ಲೇಷಿಸುವ ಸಾಮರ್ಥ್ಯ ಬೆಳೆಸಲು ಈ ಕಾರ್ಯಕ್ರಮ ಬಹಳ ಉಪಯುಕ್ತವಾಗಿದೆ

ಹೂವಿನಹಡಗಲಿ: ದೇಶದ ಸಂವಿಧಾನದಲ್ಲಿರುವ ಪ್ರಜಾಪ್ರಭುತ್ವದ ಮೌಲ್ಯ, ಹಕ್ಕು ಮತ್ತು ಕರ್ತವ್ಯ ಅರಿಯಲು ಯುವ ಸಂಸತ್ ಸಹಕಾರಿಯಾಗಿದೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಕೆ. ಅಜ್ಜಯ್ಯ ಹೇಳಿದರು.

ಇಲ್ಲಿನ ಜೆಎಸ್‌ಎಸ್ ಪಬ್ಲಿಕ್ ಶಾಲೆಯಲ್ಲಿ ತಾಲೂಕಾಡಳಿತ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಯುವ ಸಂಸತ್ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ. ಕೊಟ್ರಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂವಿಧಾನದ ಮೌಲ್ಯ, ನಾಯಕತ್ವ ಗುಣ ಹಾಗೂ ಸಾರ್ವಜನಿಕ ಸಮಸ್ಯೆ ವಿಶ್ಲೇಷಿಸುವ ಸಾಮರ್ಥ್ಯ ಬೆಳೆಸಲು ಈ ಕಾರ್ಯಕ್ರಮ ಬಹಳ ಉಪಯುಕ್ತವಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಗಳಾ, ಸಮಾಜ ಕಲ್ಯಾಣಾಧಿಕಾರಿ ಜ್ಯೋತಿ, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ ಜೈನ್, ವಕೀಲ ಅಟವಾಳಗಿ ಕೊಟ್ರೇಶ, ಹನುಮಂತಪ್ಪ ಮಾತನಾಡಿದರು.

ಬಿಎಡ್ ಕಾಲೇಜು ಪ್ರಾಚಾರ್ಯ ರಮೇಶ, ಉಪ ತಹಸೀಲ್ದಾರ್ ಮಲ್ಲಿಕಾರ್ಜುನ, ತಾಪಂ ಸಹಾಯಕ ನಿರ್ದೇಶಕ ಹೇಮಾದ್ರಿನಾಯ್ಕ ಉಪಸ್ಥಿತರಿದ್ದರು.

ವಿವಿಧ ಶಾಲಾ ವಿದ್ಯಾರ್ಥಿಗಳು ಕಾಲೇಜು ಯುವ ಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲೂಕಿನ ಮೂಲಸೌಕರ್ಯ ಅಭಿವೃದ್ಧಿ, ಶೈಕ್ಷಣಿಕ ಸಮಸ್ಯೆ ಪ್ರಸ್ತಾಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನಷ್ಟ ತಡೆಗೆ ಹಾಲಿನ ದರ 8 ರು. ಏರಿಕೆ - ಯಾವ ಪ್ಯಾಕೆಟ್‌ ಹಾಲಿಗೆ ಎಷ್ಟು?
ರೇ* ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ