ಯಲ್ಲಾಪುರ: ಪ್ರಜಾಪ್ರಭುತ್ವದ ಆಶಯದಂತೆ ಉತ್ತಮ ಸಮಾಜದ ಗೌರವಾನ್ವಿತ ನಾಗರಿಕರಾಗುವ ನಿಟ್ಟಿನಲ್ಲಿ ನಾಯಕತ್ವದ ಮೌಲ್ಯ ಬೆಳೆಸುವ ದೃಷ್ಟಿಯಿಂದ ಯುವ ಸಂಸತ್ತು ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಹೇಳಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ದನ ಮಾತನಾಡಿ, ಪ್ರಜಾಪ್ರಭುತ್ವ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಡಿದ್ದು, ಇದು ತಾಯಿಯಂತೆ ದೇಶದ ಪ್ರಜೆಗಳನ್ನು ಪೋಷಿಸುತ್ತಾ ಬಂದಿದ್ದು, ಇದೊಂದು ಅವಿನಾಶಿನಿ ವ್ಯವಸ್ಥೆಯಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಭಟ್ಟ, ಸಿಪಿಐ ಸುರೇಶ ಕುಂಬಾರ, ಪಿಎಸ್‌ಐ ರಾಜಶೇಖರ ವಂದಲಿ, ನೌಕರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ತಾಪಂ ಇಒ ರಾಜೇಶ ಧನವಾಡಕರ್, ಪಿಯು ಕಾಲೇಜಿನ ಪ್ರಾಂಶುಪಾಲ ಎಸ್.ಟಿ. ವೈದ್ಯ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಗಾಂವ್ಕರ ಬಿದ್ರೆಮನೆ ಉಪಸ್ಥಿತರಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಸ್ವಾಗತಿಸಿದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಜಿ.ಬಿ. ನರೋಟಿ ಸಂವಿಧಾನ ಪೀಠಿಕೆ ವಾಚಿಸಿದರು. ಶಿಕ್ಷಣ ಸಂಯೋಜಕ ಸುಧಾಕರ ನಾಯಕ ನಿರೂಪಿಸಿದರು. ಪ್ರಶಾಂತ ಜಿ.ಎನ್. ವಂದಿಸಿದರು.