ರಾಮನಗರ: ವಿದ್ಯಾರ್ಥಿಗಳಲ್ಲಿ, ಯುವಜನರಲ್ಲಿ ಸಂವಿಧಾನ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಒಕ್ಕೂಟ ವ್ಯವಸ್ಥೆ ಸೇರಿದಂತೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸಲು ಯುವ ಸಂಸತ್ತು ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್. ಅಶೋಕ್ ತಿಳಿಸಿದರು
ರಾಮನಗರ: ವಿದ್ಯಾರ್ಥಿಗಳಲ್ಲಿ, ಯುವಜನರಲ್ಲಿ ಸಂವಿಧಾನ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಒಕ್ಕೂಟ ವ್ಯವಸ್ಥೆ ಸೇರಿದಂತೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸಲು ಯುವ ಸಂಸತ್ತು ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್. ಅಶೋಕ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2026 ಪ್ರಯುಕ್ತ, ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಪ್ರಪಂಚಕ್ಕೆ ಅನುಕರಣೀಯ ಲಿಖಿತ ಸಂವಿಧಾನವನ್ನು ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ನೀಡಿದ್ದಾರೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ವ್ಯವಸ್ಥೆಯನ್ನು ಸರಿದಾರಿಗೆ ತರುವ, ಸಮಾಜವನ್ನು ತಿದ್ದುವ, ಸಮರ್ಥ ದೇಶವನ್ನು ಕಟ್ಟುವ ಭವ್ಯ ಭಾರತದ ರೂವಾರಿಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಶಾಲಾ-ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸಭಾ ಕಂಪನ, ವೇದಿಕೆ ಭಯ ಹೋಗಿ ಆತ್ಮವಿಶ್ವಾಸ ಮೂಡಲಿದೆ. ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ಜೀವನದಲ್ಲಿ ಪೌರಪ್ರಜ್ಞೆ, ನೈತಿಕ ಪ್ರಜ್ಞೆ ರೂಢಿಸಿಕೊಳ್ಳಬೇಕು ಎಂದು ಅಶೋಕ್ ತಿಳಿಸಿದರು.
ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಿ, ಅಣಕು ಸಂಸತ್ತು ಪ್ರದರ್ಶನ ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಪಂ ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ. ಕುಮಾರ್, ಕೆಡಿಪಿ ಸದಸ್ಯರಾದ ಗುರುಮೂರ್ತಿ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
(ಫೋಟೋ ಕ್ಯಾಫ್ಷನ್)
ರಾಮನಗರದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ, ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.