ದೇಶದ ಅಭಿವೃದ್ಧಿಗೆ ಯುವಶಕ್ತಿ ಆಧಾರಸ್ತಂಭ: ಕಾಳೇಗೌಡ

KannadaprabhaNewsNetwork |  
Published : Nov 15, 2026, 02:30 AM IST
ಚಿತ್ರ: 8ಎಂಡಿಕೆ5: ನಶಾ ಮುಕ್ತ ಯುವ ಅಭಿಯಾನ ಕಾರ್ಯಕ್ರಮ  | Kannada Prabha

ಸಾರಾಂಶ

ಮಾದಕ ವ್ಯಸನ ದೇಶದ ಯುವಜನತೆಯನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಕಾಳೇಗೌಡ ಹೇಳಿದರು.

ಗೋಣಿಕೊಪ್ಪ : ಮಾದಕ ವ್ಯಸನ ದೇಶದ ಯುವಜನತೆಯನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಕಾಳೇಗೌಡ ಹೇಳಿದರು. ಗೋಣಿಕೊಪ್ಪದ ಕಾವೇರಿ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ದುರುಪಯೋಗದ ಕುರಿತು ಜಾಗೃತಿ ಕಾರ್ಯಕ್ರಮ ನಶಾ ಮುಕ್ತ್ ಯುವ ಅಭಿಯಾನ ಉದ್ಘಾಟಿಸಿ ಮಾತನಾಡಿದರು.ಮಾದಕ ವಸ್ತು ಪಿಡುಗನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರವು 2020ರ ಆಗಸ್ಟ್ 15ರಂದು ನಶಾ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದು, ದೇಶಾದ್ಯಂತ ಜಾಗೃತಿ ಮೂಡಿಸುತ್ತಿದೆ. ವ್ಯಸನಕ್ಕೆ ಒಳಗಾದ ಬಳಿಕ ಅದರಿಂದ ಹೊರಬರುವುದು ಸವಾಲಿನ ಕೆಲಸವಾಗಿರುವುದರಿಂದ ಮುನ್ನೆಚ್ಚರಿಕೆ ಮತ್ತು ಜಾಗೃತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಕ್ರೀಡೆ, ಸಾಹಿತ್ಯ, ಕಲೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಮಾತನಾಡಿ, ದೈಹಿಕ ಆರೋಗ್ಯಕ್ಕೆ ಹಾನಿ ಮಾಡುವುದಲ್ಲದೆ, ವೈಯಕ್ತಿಕ ಬದುಕು, ಸಮಾಜ ಮತ್ತು ಇಡೀ ದೇಶವನ್ನೇ ವಿನಾಶದತ್ತ ಕೊಂಡೊಯ್ಯುವ ನಶೆ ಹಾಗೂ ದುಶ್ಚಟಗಳಿಂದ ಪ್ರತಿಯೊಬ್ಬರೂ ದೂರವಿರಬೇಕು ಎಂದರು.ಐಕ್ಯೂಎಸಿ ಸಂಯೋಜಕಿ ಡಾ. ನಯನ ತಮ್ಮಯ್ಯ, ಎನ್‌ಎಸ್‌ಎಸ್ ಅಧಿಕಾರಿಗಳಾದ ಕುಶಾಲಪ್ಪ ಎಂ.ಎ., ಪೂಜಾ ಕೆ.ಎಸ್., ಎನ್‌ಎಸ್‌ಎಸ್ ನಾಯಕರಾದ ಪಲ್ವಿನ್, ಕೃತಿ ಕಾವೇರಮ್ಮ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ