ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ

KannadaprabhaNewsNetwork |  
Published : May 07, 2025, 12:46 AM IST
ಪೋಟೊ: 06ಎಸ್‌ಎಂಜಿಕೆಪಿ01ಶಿವಮೊಗ್ಗದ ನಗರದ ಬಂಜಾರ ಕನ್ವೆನ್ಷನ್ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಯುವ ನಾಯಕತ್ವ ಸಮಾವೇಶ, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ. ದೇಶದಲ್ಲಿ ಮಾತು ಕೊಟ್ಟ ಹಾಗೆ ನಡೆದ ಯಾವುದಾದರೊಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ. ದೇಶದಲ್ಲಿ ಮಾತು ಕೊಟ್ಟ ಹಾಗೆ ನಡೆದ ಯಾವುದಾದರೊಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಮಂಗಳವಾರ ನಗರದ ಬಂಜಾರ ಕನ್ವೆನ್ಷನ್ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಯುವ ನಾಯಕತ್ವ ಸಮಾವೇಶ, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಭೂ ಹಕ್ಕು ಕೊಟ್ಟಿದ್ದು, ಉಚಿತ ವಿದ್ಯುತ್ ನೀಡಿದ್ದು, ಕಾಂಗ್ರೆಸ್ ಪಕ್ಷ. ದೇಶದ ಅಭಿವೃದ್ಧಿಗೆ, ಕೃಷಿ ಬೆಳವಣಿಗೆಗೆ, ಜಿಡಿಪಿ ಬೆಳವಣಿಗೆಗೆ ಅನೇಕ ಕೊಡುಗೆಗಳನ್ನು ಕಾಂಗ್ರೆಸ್ ನೀಡಿದೆ ಎಂದರು.

ರಾಜ್ಯ ಸರ್ಕಾರ ಕೊಡುತ್ತಿರುವ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಗಂಟೆ ಬಾರಿಸುತ್ತಿದೆ. ಆದರೆ ದೇವಾಲಯಗಳಲ್ಲಿ ಗಂಟೆ ಹೊಡೆಯುತ್ತಾರೋ ಗೊತ್ತಿಲ್ಲ. ಉಚಿತ ಮೊಟ್ಟೆ, ಹಾಲು, ಬೂಟು, ಶಿಕ್ಷಣ ಎಲ್ಲವನ್ನೂ ನೀಡಿ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಇದನ್ನು ಪಕ್ಷದ ಯುವಕರು ಭೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಿಸಿ ಜನಪರ ಧ್ವನಿಯಾಗಬೇಕು. ನಿಮಗೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿ, ಇಂದಿನ ಕಾರ್ಯಕ್ರಮ ಅದೆಷ್ಟೋ ಯುವಕರಿಗೆ ದಾರಿದೀಪವಾಗಬೇಕು. ಹಿಂದೆ ಕಾಂಗ್ರೆಸ್‌ನಲ್ಲಿ ಪಕ್ಷದ ನಾಯಕರೇ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಈಗ ಚುನಾವಣೆಗಳ ಮೂಲಕ ನೀವು ಗೆದ್ದು ಯುವ ನಾಯಕರಾಗಿದ್ದೀರಿ. ಈಗ ನಿಮ್ಮ ಸಾಮರ್ಥ್ಯವನ್ನು ತೋರಿಸಿ ಪಕ್ಷ ಬಲಪಡಿಸಿ. ಕೇವಲ ಲೆಟರ್‌ಹೆಡ್ ಮತ್ತು ವಿಸಿಟಿಂಗ್ ಕಾರ್ಡ್‌ಗೆ ಅಧಿಕಾರವನ್ನು ಸೀಮಿತಗೊಳಿಸಬೇಡಿ ಎಂದು ತಿಳಿಸಿದರು.

ಪಕ್ಷವನ್ನು ಕಟ್ಟಬೇಕಾದರೆ ಮೊದಲು ಯುವಕರ ತಂಡ ಕಟ್ಟಬೇಕು. ಯುವಕರನ್ನು ಗುರುತಿಸಬೇಕು. ನಿಮ್ಮ ಜೊತೆಗೆ ೪ ಜನ ಹಿಂದೆ ಬರುತ್ತಾರೆ ಎಂದರೆ ಮಾತ್ರ ಮತ್ತು ನೀವು ಯಾವುದಾದರೂ ಚುನಾವಣೆಯಲ್ಲಿ ಗೆದ್ದಿದ್ದೀರಿ ಎಂದಾಗ ಮಾತ್ರ ನಾಯಕರಾಗಲು ಸಾಧ್ಯ. ಬೂತ್ ಮಟ್ಟದಲ್ಲಿ ಯುವ ಕಾಂಗ್ರೆಸ್ ಅನ್ನು ಕಟ್ಟಬೇಕು. ರಾಷ್ಟ್ರೀಯ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನಿಮಗೆಲ್ಲ ಮಾದರಿಯಾಗಲಿ ಎಂದರು.

ರಾಷ್ಟ್ರೀಯ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾತನಾಡಿ, ಸಂವಿಧಾನ ಉಳಿಸಲು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ೧೫೧ ದಿನ ೪೫೦೦ ಕಿಮೀ ದೇಶದಲ್ಲಿ ಪಾದಯಾತ್ರೆ ಮಾಡಿದರು. ದೇಶದ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿದ ಪಕ್ಷ ಕಾಂಗ್ರೆಸ್ ಆಗಿದೆ. ಬಿಜೆಪಿಯವರು ಸುಳ್ಳಿನ ಮೇಲೆ ಪಕ್ಷ ಕಟ್ಟುತ್ತಾರೆ. ಶವದ ಮೇಲೆ ರಾಜಕೀಯ ಮಾಡುತ್ತಾರೆ ಎಂದು ಕಿಡಿಕಾರಿದರು.

ಅಚ್ಛೇದಿನ್ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಬೆಲೆ ಏರಿಕೆ ಮಾಡುತ್ತಾ ಬಂದಿದೆ. ನಿರುದ್ಯೋಗ, ಸುಳ್ಳು, ಭ್ರಷ್ಟಾಚಾರ ಮೂಲಕವೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಪೆಟ್ರೋಲ್ ಬೆಲೆ 100 ರು. ದಾಟಿದೆ. ಬಡವರಿಗೆ ಸೂರು ಇಲ್ಲ. ನಿರುದ್ಯೋಗ ತಾಂಡವವಾಡುತ್ತಿದೆ. ಇದೇ ಬಿಜೆಪಿಯ ಸಾಧನೆ ಎಂದು ಲೇವಡಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ಪ್ರಮುಖರಾದ ಎಚ್.ಎಸ್.ಸುಂದರೇಶ್, ರವಿಕುಮಾರ್, ಪಲ್ಲವಿ, ಆಯನೂರು ಮಂಜುನಾಥ್, ಶ್ರೀನಿವಾಸ ಕರಿಯಣ್ಣ, ಎಚ್.ಸಿ.ಯೋಗೀಶ್, ಎನ್.ರಮೇಶ್, ಎಂ.ಶ್ರೀಕಾಂತ್, ಗೋಣಿ ಮಾಲತೇಶ್, ಮಧುಸೂದನ್, ವಿಜಯಕುಮಾರ್(ದನಿ), ವೇದಾ ವಿಜಯಕುಮಾರ್, ಚೇತನ್, ಯಮುನಾ ರಂಗೇಗೌಡ ಇದ್ದರು.

PREV

Recommended Stories

ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ