ಜಿಲ್ಲೆಯಾದ್ಯಂತ ಯುವ ನೋಂದಣಿ ಅಭಿಯಾನ

KannadaprabhaNewsNetwork |  
Published : Jul 29, 2026, 03:00 AM IST
(ಫೋಟೊಬಿಕೆಟಿ1ಜಿಲ್ಲಾಧಿಕಾರಿ ಸಂಗಪ್ಪ  ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಮೇರಾ ಭಾರತ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೇರಾ ಯುವ ಭಾರತ ವತಿಯಿಂದ ದೇಶವ್ಯಾಪಿ ನಡೆಯುತ್ತಿರುವ 5 ಕೋಟಿ ಯುವಕರ ನೋಂದಣಿ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮಾಯ್ ಭಾರತ ನೋಂದಣಿ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೇರಾ ಯುವ ಭಾರತ ವತಿಯಿಂದ ದೇಶವ್ಯಾಪಿ ನಡೆಯುತ್ತಿರುವ 5 ಕೋಟಿ ಯುವಕರ ನೋಂದಣಿ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮಾಯ್ ಭಾರತ ನೋಂದಣಿ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಮೇರಾ ಭಾರತ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಅಭಿಯಾನದ ಉದ್ದೇಶ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಯುವಕರನ್ನು ಮಾಯ್ ಭಾರತ ಪೋರ್ಟಲ್ಗೆ ನೋಂದಾಯಿಸಿ, ಸ್ವಯಂಸೇವೆ, ನಾಯಕತ್ವ ಅಭಿವೃದ್ಧಿ, ಕೌಶಲ್ಯ ವೃದ್ಧಿ, ಅನುಭವಾಧಾರಿತ ಕಲಿಕೆ, ರಾಷ್ಟ್ರ ನಿರ್ಮಾಣ ಹಾಗೂ ಸಮುದಾಯ ಸೇವೆ ಮುಂತಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೇರೇಪಿಸುವುದಾಗಿದೆ ಎಂದರು. ಮೇರಾ ಯುವ ಭಾರತ ಬಾಗಲಕೋಟೆಯ ಜಿಲ್ಲಾ ಯುವ ಅಧಿಕಾರಿ ಅಶ್ವಿನಿ ಮಾತನಾಡಿ, ಜಿಲ್ಲೆಯ ಎಲ್ಲಾ ಅರ್ಹ ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮಾಯ್ ಭಾರತಗೆ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ಜತೆಗೆ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು, ಎನ್.ಎಸ್.ಎಸ್, ಎನ್ಸಿಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಸ್ವಯಂಸೇವಾ ಸಂಸ್ಥೆಗಳು, ಯುವಕ ಸಂಘಗಳು ಹಾಗೂ ಸ್ವಯಂಸೇವಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಹೆಚ್ಚಿನ ಯುವಕರನ್ನು ನೋಂದಾಯಿಸಲು ಸಹಕರಿಸುವಂತೆ ಕೋರಿದರು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿದ ಕಾಲೇಜುಗಳಿಗೆ ಆಗಸ್ಟ 15ರಂದು ಸನ್ಮಾನಿಸಲಾಗುವುದೆಂದು ತಿಳಿಸಿದರು. ನೋಂದಣಿಗಾಗಿ ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಹಾಗೂ ಮೂಲಭೂತ ವೈಯಕ್ತಿಕ ಮಾಹಿತಿಯಷ್ಟೇ ಸಾಕಾಗುತ್ತದೆ. ಮಾಯ್ ಭಾರತ್ ವೇದಿಕೆಯ ಮೂಲಕ ಯುವಕರಿಗೆ ಸ್ವಯಂಸೇವಾ ಅವಕಾಶಗಳು, ತರಬೇತಿ ಕಾರ್ಯಕ್ರಮಗಳು, ನಾಯಕತ್ವ ಅಭಿವೃದ್ಧಿ, ಪ್ರಮಾಣಪತ್ರಗಳು ಹಾಗೂ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳು ಲಭ್ಯವಾಗುತ್ತವೆ. ಬಾಗಲಕೋಟೆ ಜಿಲ್ಲಾ ಯುವ ಕಚೇರಿ ಜಿಲ್ಲೆಯ ಎಲ್ಲಾ ಯುವಕರು ಹಾಗೂ ಸಂಬಂಧಿತ ಸಂಸ್ಥೆಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಾಯ್ ಭಾರತ್ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದೆ.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರಪಾದ ಡೂಗನವರ ಸೇರಿ ಇತರರು ಉಪಸ್ಥಿತರಿದ್ದರು.

ಯುವಕರ ನೋಂದಣಿಯನ್ನು ಸುಲಭಗೊಳಿಸುವ ಉದ್ದೇಶದಿಂದ ಮಾಯ್ ಭಾರತ್ ಬಾಗಲಕೋಟೆ ವತಿಯಿಂದ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು, ಎನ್.ಎಸ್.ಎಸ್, ಎನ್ಸಿಸಿ ಘಟಕಗಳು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಯುವಕ ಸಂಘಗಳು, ಸರ್ಕಾರಿ ಕಚೇರಿಗಳು ಹಾಗೂ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಿಶೇಷ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆಸಕ್ತ 15 ರಿಂದ 29 ವರ್ಷದೊಳಗಿನ ಯುವಕರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಥವಾ ಮಾಯ್ ಭಾರತ್ ಪೋರ್ಟಲ್ಗೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

-ಸಂಗಪ್ಪ, ಜಿಲ್ಲಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಬಳ್ಳಾಪುರದಲ್ಲಿ ಐತಿಹಾಸಿಕ ರಕ್ತದಾನ ಶಿಬಿರ
ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ಐಜಿಪಿ ಭೇಟಿ