ಕನ್ನಡಪ್ರಭ ವಾರ್ತೆ ದೇವಲಾಪುರ
ನಾಗಮಂಗಲ ತಾಲೂಕು ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್, ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಮಾದಕ ದ್ರವ್ಯಗಳಿಂದ ದೂರವಿರುವಂತೆ ಕರೆ ನೀಡಿದರು.
ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ಯುವಕರು ಮಾದಕ ದ್ರವ್ಯಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳು ಹೆಚ್ಚು ದುಷ್ಪರಿಣಾಮ ಬೀರಿ ಮನುಷ್ಯರನ್ನು ಮಾನಸಿಕ ಮತ್ತು ದೈಹಿಕವಾಗಿ ದುರ್ಬಲಗೊಳಿಸುತ್ತವೆ ಎಂದು ಎಚ್ಚರಿಕೆ ನೀಡಿದರು.ಮಾದಕ ವ್ಯಸನದಿಂದ ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ಯುವಕರನ್ನು ಸರಿ ದಾರಿಗೆ ತರುವಲ್ಲಿ ಶಾಲಾ ಕಾಲೇಜುಗಳು ಮತ್ತು ಸಮಾಜದ ಹಿರಿಯರು ನಿರಂತರ ಪ್ರಯತ್ನದಲ್ಲಿದ್ದರೂ ಫಲಕಾರಿಯಾಗದಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ನಂಜಮ್ಮಣ್ಣಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಗಿರೀಶ್, ನೂರ್ ಅಫ್ರೋಜ್, ನಾಗೇಂದ್ರ, ಇಂದ್ರೇಶ್, ನವೀನ್, ಶ್ಯಾಮಲಾ, ಸಮ್ಯ, ಕಾಂತರಾಜು, ಯೋಗೇಶ್ ಉಪಸ್ಥಿತರಿದ್ದರು. ಭೂಮಿಕ ಮತ್ತು ಸಿಂಚನ ನಿರೂಪಿಸಿದರೆ, ಹರ್ಷಿತ ಮತ್ತು ಮೋಹನಕುಮಾರಿ ಪ್ರಾರ್ಥಿಸಿದರು. ಹರ್ಷಿತ ಡಿ.ಎಚ್. ಸ್ವಾಗತಿಸಿ ಚೈತ್ರ ವಂದಿಸಿದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪೊಲೀಸ್ ಅಧಿಕಾರಿಗಳು ಹಾಗೂ ಓಂಶ್ರೀನಿಕೇತನ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಜಾಗೃತಿ ಜಾಥಾ ನಡೆಸಿದರು.
ಈ ವೇಳೆ ಸಿಪಿಐ ಪ್ರಕಾಶ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಜಾಗೃತಿ ಅರಿವು ಮೂಡಿಸಿದರು. ನಗರ ಆಟೋ ಸಂಘದ ಚಾಲಕರು, ವಿದ್ಯಾರ್ಥಿಗಳು, ಶಿಕ್ಷಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.