ಎಂಪಿ ಶ್ರೇಯಸ್ ಪಟೇಲ್ ಹುಟ್ಟುಹಬ್ಬದ ಅಂಗವಾಗಿ ಯುವ ಜನ ಸೇವಾ ಕಾರ್ಯಕ್ರಮ

KannadaprabhaNewsNetwork |  
Published : Nov 17, 2025, 01:02 AM IST
ಎಂಪಿ ಶ್ರೇಯಸ್ ಪಟೇಲ್ ಹುಟ್ಟು ಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ವಿವಿಧ ಜನ ಸೇವಾ ಕಾರ್ಯಕ್ರಮಗಳು | Kannada Prabha

ಸಾರಾಂಶ

ಹಾಸನ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ರೋಗಿಗೆಗಳ ಆರೋಗ್ಯ ವಿಚಾರಿಸಿದರು. ಬಳಿಕ ಅಂಧಮಕ್ಕಳ ಶಾಲೆ, ವೃದ್ಧಾಶ್ರಮಗಳಲ್ಲಿ ಅನ್ನದಾನ ಬೀದಿ ಬದಿ ವಾಸಿಗಳಿಗೆ ಹಾಸಿಗೆ ಹೊದಿಕೆ ವಿತರಿಸುವ ಮೂಲಕ ಇಡೀ ದಿನವನ್ನು ಸೇವಾ ದಿನವಾಗಿ ಆಚರಿಸಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಹಾಸನ ಸಂಸದರಾದ ಶ್ರೇಯಸ್ ಪಟೇಲ್ ಅವರಿಗೆ 34ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಜನಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಶ್ರೇಯಸ್ ಪಟೇಲ್ ಅವರಿಗೆ ದೇವರು ಆಯಸ್ಸು ಆರೋಗ್ಯದ ಜೊತೆಗೆ ಇನ್ನಷ್ಟು ದೊಡ್ಡ ಹುದ್ದೆಗಳಿಸುವ ಶಕ್ತಿ ಕೊಟ್ಟು ಇನ್ನಷ್ಟು ಜನ ಸೇವೆಗೆ ಅವಕಾಶ ಮಾಡಿಕೊಡಲಿ ಎಂದು ಶುಭಹಾರೈಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸಂಸದ ಶ್ರೇಯಸ್ ಪಟೇಲ್ ಹುಟ್ಟುಹಬ್ಬದ ಅಂಗವಾಗಿ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಸಾಕ್ಷಿಯಾದರು.

ಬೆಳಗ್ಗೆ ನೀರುವಾಗಿಲು ಆಂಜನೇಯ ಸ್ವಾಮಿ ದೇವಾಲಯ ಹಾಗೂ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಹಾಸನ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ರೋಗಿಗೆಗಳ ಆರೋಗ್ಯ ವಿಚಾರಿಸಿದರು. ಬಳಿಕ ಅಂಧಮಕ್ಕಳ ಶಾಲೆ, ವೃದ್ಧಾಶ್ರಮಗಳಲ್ಲಿ ಅನ್ನದಾನ ಬೀದಿ ಬದಿ ವಾಸಿಗಳಿಗೆ ಹಾಸಿಗೆ ಹೊದಿಕೆ ವಿತರಿಸುವ ಮೂಲಕ ಇಡೀ ದಿನವನ್ನು ಸೇವಾ ದಿನವಾಗಿ ಆಚರಿಸಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಹಾಸನ ಸಂಸದರಾದ ಶ್ರೇಯಸ್ ಪಟೇಲ್ ಅವರಿಗೆ 34ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಜನಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಶ್ರೇಯಸ್ ಪಟೇಲ್ ಅವರಿಗೆ ದೇವರು ಆಯಸ್ಸು ಆರೋಗ್ಯದ ಜೊತೆಗೆ ಇನ್ನಷ್ಟು ದೊಡ್ಡ ಹುದ್ದೆಗಳಿಸುವ ಶಕ್ತಿ ಕೊಟ್ಟು ಇನ್ನಷ್ಟು ಜನ ಸೇವೆಗೆ ಅವಕಾಶ ಮಾಡಿಕೊಡಲಿ ಎಂದು ಶುಭಹಾರೈಸಿದರು.

ಚಿಕ್ಕ ವಯಸ್ಸಿನಲ್ಲಿ ಸಂಸದರಾಗಿ ಅಪಾರ ಜನಸೇವೆ ಮೂಲಕ ಜನಮನ್ನಣೆ ಗಳಿಸಿರುವ ಶ್ರೇಯಸ್ ಪಟೇಲ್ ಅವರು ಸಂಸದರಾದ ಆರಂಭದಿಂದಲೂ ಪ್ರತಿಯೊಬ್ಬರ ಕಷ್ಟಗಳನ್ನು ಆಲಿಸುವ ಮೂಲಕ ಅದಕ್ಕೊಂದು ಪರಿಹಾರ ಕಲ್ಪಿಸುವ ನಿಟ್ಟಿರಲಿ ಕೆಲಸ ಮಾಡುತ್ತಿದ್ದಾರೆ. ಇದು ಒಬ್ಬ ಜನನಾಯಕನಿಗೆ ಇರಬೇಕಾದ ಬದ್ಧತೆ, ಯುವ ವಯಸ್ಸಿನಲ್ಲೇ ಜನಪರ ಕೆಲಸಗಳಲ್ಲಿ ಹೆಸರುವಾಸಿಯಾಗಿರುವ ಶ್ರೇಯಸ್ ಪಟೇಲ್ ಯುವ ಮನಸ್ಸುಗಳಿಗೆ ಮಾದರಿಯಾಗಿದ್ದಾರೆ ಎಂದರು.

ಶ್ರೇಯಸ್ ಪಟೇಲ್ ಹುಟ್ಟು ಹಬ್ಬದ ದಿನವನ್ನು ಯುವ ಕಾಂಗ್ರೆಸ್ ವತಿಯಿಂದ ಸೇವಾ ದಿನವನ್ನಾಗಿ ಆಚರಿಸಿ ದೇವಾಲಯ ದರ್ಗಾ ಚರ್ಚ್‌ಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಇದರ ಜೊತೆ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಭೇಟಿ ಮಾಡಿ ಅವರಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ. ಇದಲ್ಲದೆ ರಸ್ತೆ ಬದಿವಾಸಿಗಳಿಗೆ ಹಾಸಿಗೆ ಹೊದಿಕೆ ವಿತರಣೆ ಮಾಡಿ ಅವರಿಗೆ ನೆರವಾಗಲು ಮುಂದಾಗಿರುವ ನಾವು ಅನಾಥಾಶ್ರಮ ವೃದ್ಧಾಶ್ರಮಗಳಿಗೂ ನಮ್ಮ ಕೈಲಾದಷ್ಟು ಸಹಾಯ ಮಾಡಿ ಶ್ರೇಯಸ್ ಪಟೇಲ್ ಅವರಿಗೆ ಸೇವೆಯ ಮೂಲಕ ಆಶೀರ್ವದಿಸಲು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಶ್ರೇಯಸ್ ಪಟೇಲ್ ಅವರಿಗೆ ದೇವರು ಆರೋಗ್ಯ ಆಯಸ್ಸು ಕೊಟ್ಟು ಇನ್ನಷ್ಟು ಜನ ಸೇವೆಗೆ ಅವಕಾಶ ಮಾಡಿಕೊಡಲಿ ಎಂದು ಶುಭ ಹಾರೈಸಿದರು.

ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಇಸ್ಮಾಯಿಲ್ ವಿವೇಕ್, ಮಹದೇವ್ ಯಶವಂತ್, ಸಹ್ಯದ್ ಇಸ್ಮಾಯಿಲ್, ನಿತಿನ್, ಅವಿನಾಶ್, ಪ್ರೀತಂ, ಅಭಿಷೇಕ್, ಹಿಂದೂ ಕುಮಾರ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ