ಯುವಜನತೆ ಉತ್ತಮ ಹವ್ಯಾಸ ರೂಢಿಸಿಕೊಳ್ಳಿ

KannadaprabhaNewsNetwork |  
Published : Aug 08, 2026, 01:30 AM IST
ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ನಡೆಯಿತು. | Kannada Prabha

ಸಾರಾಂಶ

ಡಾ. ಮಹಾಂತ ಶಿವಯೋಗಿಗಳು ವ್ಯಸನಿಗಳ ಮನಪರಿವರ್ತಿಸುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು ಎಂದು ಬೆಂಗಳೂರು ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ತಿಳಿಸಿದರು.

-ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನ; ವ್ಯಸನಮುಕ್ತ ದಿನಾಚರಣೆ

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಡಾ. ಮಹಾಂತ ಶಿವಯೋಗಿಗಳು ವ್ಯಸನಿಗಳ ಮನಪರಿವರ್ತಿಸುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು ಎಂದು ಬೆಂಗಳೂರು ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ತಿಳಿಸಿದರು.

ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ ಇಲ್ಲಿನ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶವು ಉತ್ತಮ ಸಂಸ್ಕಾರ, ಪರಂಪರೆ ಹಾಗೂ ಯುವ ಶಕ್ತಿಯನ್ನು ಹೊಂದಿದೆ. ದೇಶದ ಬಲವಾಗಿರುವ ಯುವಜನತೆಯು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯುವ ಸಮೂಹವು ಸ್ವಯಂ ಶಿಸ್ತು, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳಲ್ಲಿ ಪಾಲ್ಗೊಳುವಿಕೆ, ಪುಸ್ತಕ ಓದುವ ಹವ್ಯಾಸವನ್ನು ಮೈಗೂಡಿಸಿಕೊಂಡು ವ್ಯಸನಗಳಿಂದ ದೂರವಿರಬೇಕು. ವಿದ್ಯಾರ್ಥಿ ಜೀವನದಲ್ಲಿ ನಿಖರ ಗುರಿ, ನಿರಂತರ ಅಧ್ಯಯನಶೀಲರಾಗಿ ಸಾಧಕರಾಗಬೇಕು ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಯಲಕ್ಷ್ಮಿ ಮಾತನಾಡಿ, ಇಂದಿನ ಯುವಕರೆ ನಾಳಿನ ಪ್ರಜೆಗಳು. ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನ, ಗಾಂಜಾ ಸೇರಿದಂತೆ ಇತರೆ ರೀತಿಯ ಮಾದಕ ವ್ಯಸನಗಳಿಂದ ದೂರವಿದ್ದು, ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು. ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡಿಕೊಳ್ಳಿ. ನೀವುಗಳು ಜೀವನದ ಮೌಲ್ಯಗಳನ್ನು ಅರಿತು ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಲ್ಲಿ ಸಾಮಾಜಿಕವಾಗಿ ವ್ಯಸನಮುಕ್ತ ಮಾಡುವ ಕುರಿತು ಜಾಗೃತಿ ಮೂಡಿಸಿ ಎಂದು ಉಪನ್ಯಾಸ ನೀಡಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿದ್ದು ನಶಾಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಪಾಲ್ಗೊಳ್ಳಬೇಕು. ದುಶ್ಚಟಗಳಿಗೆ ದಾಸನಾದರೆ ದೇಹದ ಅಂಗಗಳು ಹಾಳಾಗಿ ಆರೋಗ್ಯವು ಹದಗೆಡುತ್ತದೆ ಎಂದರು.

ಮನೋತಜ್ಞ ಡಾ. ಗಿರೀಶ್ ಅವರು ಮಾತನಾಡಿ, ವ್ಯಸನಗಳ ದುಷ್ಪರಿಣಾಗಳಿಂದ ಹೆಚ್ಐವಿ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.14416 ಸಹಾಯವಾಣಿಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ವೈದ್ಯರಿಗೆ ತಿಳಿಸಿದರೆ ವೈದ್ಯರು ಸೂಕ್ತ ಮಾರ್ಗದರ್ಶನ ನೀಡುತ್ತಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವ್ಯಸನಮುಕ್ತ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಅಶೋಕ್ ಕುಮಾರ್, ಪ್ರಾಂಶುಪಾಲ ಉಮೇಶ್ ಬಾವಿಕಟ್ಟಿ ಭಾಗವಹಿಸಿದ್ದರು.

ಫೋಟೋ-7ಕೆಡಿಬಿಪಿ4- ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಉಪವಾಸ ಸತ್ಯಾಗ್ರಹ: ಸಚಿವ ಅಜಯ್ ಸಿಂಗ್ ಭರವಸೆ
ಎರಡು ದಿನ ಬರ ಪರಿಸ್ಥಿತಿ ಪರಿಶೀಲನೆ, ಸಭೆ