ಯುವಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ಬಸ್ರೂರು ರಾಜೀವ್ ಶೆಟ್ಟಿ

KannadaprabhaNewsNetwork |  
Published : Aug 18, 2024, 01:48 AM IST
ರೆಡ್‌ಕ್ರಾಸ್‌ | Kannada Prabha

ಸಾರಾಂಶ

ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದನಲ್ಲಿ ಮಂಗಳೂರು ವಿವಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಿಗೆ ಒಂದು ದಿನದ ಯೂತ್ ರೆಡ್‌ಕ್ರಾಸ್ ಅಭಿವಿನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಬದುಕಿನ ನಿಜವಾದ ಅರ್ಥವೇ ಸೇವೆ. ಯುವಜನರಿಗೆ ಶಿಕ್ಷಣದ ಜೊತೆಗೆ ಸಮಾಜ ಸೇವೆಯಂತಹ ಚಟುವಟಿಕೆಗಳಲ್ಲಿ ಭಾಗವಹಿಸಲು ಸೂಕ್ತ ಮಾರ್ಗದರ್ಶನ ನೀಡಿದ್ದಲ್ಲಿ ಅವರು ಉತ್ತಮ ನಾಗರಿಕರಾಗುವುದರೊಂದಿಗೆ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.

ಅವರು ಶನಿವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದನಲ್ಲಿ ಮಂಗಳೂರು ವಿವಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಿಗೆ ಆಯೋಜಿಸಲಾದ ಒಂದು ದಿನದ ಯೂತ್ ರೆಡ್‌ಕ್ರಾಸ್ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್‌ನ ನೋಡೆಲ್ ಅಧಿಕಾರಿ ಡಾ. ಗಾಯತ್ರಿ ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿನ ರೆಡ್‌ಕ್ರಾಸ್ ಘಟಕವು ಸಮಾಜಮುಖಿ ಕಾರ್ಯಕ್ರಮಗಳನ್ನು ಯುವಜನತೆಯನ್ನು ಬಳಸಿಕೊಂಡು ಆಯೋಜಿಸುತ್ತಿದೆ. ಕಾಲೇಜುಗಳಲ್ಲಿ ರೆಡ್‌ಕ್ರಾಸ್ ಘಟಕವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತರಬೇತಿಯು ಅತ್ಯಗತ್ಯವಾಗಿದೆ ಎಂದರು.

ಕುಂದಾಪುರ ರೆಡ್‌ಕ್ರಾಸ್ ಘಟಕದ ಸಭಾಪತಿ ಎಸ್. ಜಯಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ರಕ್ತನಿಧಿ ಕೇಂದ್ರಗಳನ್ನು ಪ್ರಾರಂಭಿಸಿ, ಅಗತ್ಯವಿರುವವರಿಗೆ ರಕ್ತವನ್ನು ಒದಗಿಸುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳು ಇತರರಿಗೆ ಸಹಾಯಮಾಡುವ ಪ್ರವೃತ್ತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ರೆಡ್‌ಕ್ರಾಸ್ ರಾಜ್ಯ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್, ನಿಕಟಪೂರ್ವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕುಂದಾಪುರ ರೆಡ್‌ಕ್ರಾಸ್ ಘಟಕದ ಖಜಾಂಚಿ ಶಿವರಾಂ ಶೆಟ್ಟಿ, ಕುಂದಾಪುರ ಯೂತ್ ರೆಡ್‌ಕ್ರಾಸ್ ಪ್ರೋಗ್ರಾಮಿಂಗ್ ಆಫೀಸರ್ ಸತ್ಯನಾರಾಯಣ ಪುರಾಣಿಕ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡೆಲ್ ಅಧಿಕಾರಿ ಜಯಶ್ರೀ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಅಧಿಕಾರಿ ಡಾ. ದಿವ್ಯಾ ಎಂ.ಎಸ್., ರೆಡ್‌ಕ್ರಾಸ್ ಹಾಗೂ ಡಿಡಿಆರ್‌ಸಿ ಸಿಬ್ಬಂದಿ, ವಿವಿಧ ಪ್ರಥಮ ದರ್ಜೆ ಕಾಲೇಜುಗಳ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಸ್ವಾಗತಿಸಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಉಪನ್ಯಾಸಕ ಸನತ್ ಕೋಟ್ಯಾನ್ ನಿರೂಪಿಸಿದರು. ರೆಡ್‌ಕ್ರಾಸ್ ಸಂಸ್ಥೆಯ ಖಜಾಂಚಿ ರಮಾದೇವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ