ಬ್ಯಾಡಗಿ: ದೇಶದಲ್ಲಿ ಪ್ರತಿದಿನ ನಡೆಯುವ ಅಪಘಾತದಲ್ಲಿ ರಕ್ತದ ಕೊರತೆಯಿಂದ ಸಾವಿರಾರು ಜನರು ಸಾವಿಗೀಡಾಗುತ್ತಿದ್ದು, ಯುವಕರು ಯಾವುದೇ ಅಳುಕಿಲ್ಲದೇ ರಕ್ತದಾನ ಮಾಡಿದಲ್ಲಿ ಸಾವಿರಾರು ಜನರ ಪ್ರಾಣ ಉಳಿಸುಬಹುದು ಎಂದು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ರಾಜ್ ತಿಲಕ್ ತಿಳಿಸಿದರು.ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ ರಕ್ತದಾದ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಕ್ತದಾನ ಮಾಡಲು ಯುವಕರು ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು. ಯಾವುದೇ ಅಂಜಿಕೆ ಇಲ್ಲದೇ ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡುವಂತೆ ಸೂಚನೆ ನೀಡಿದರು.ಮೋಹನಕುಮಾರ ಹುಲ್ಲತ್ತಿ ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿದ್ದು, ಸದೃಢ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ದೈಹಿಕ ವ್ಯಾಯಾಮ, ಪ್ರಾಣಾಯಾಮ ಜೀವನಶೈಲಿ ಬದಲಾವಣೆ ಮಾಡಿಕೊಂಡಲ್ಲಿ ರಕ್ತ ಉತ್ಪತ್ತಿಯು ಸಹ ಹೆಚ್ಚಾಗಲಿ ಎಂದರು.ಈ ವೇಳೆ ಜಿಲ್ಲಾ ರಕ್ತನಿಧಿ ಕೇಂದ್ರದ ಬಸವರಾಜ ಕಮತದ, ತಾಲೂಕಾಸ್ಪತ್ರೆ ಶಶಿಕುಮಾರ್, ಬ್ಯಾಂಕ್‌ನ ಸಿಬ್ಬಂದಿ ವಿಜಯಲಕ್ಷ್ಮಿ ದಾನರೆಡ್ಡಿ, ಅಭಯ, ಗಣೇಶ ಮೂಡಿ, ರಾಮು ಕಮ್ಮಾರ, ಅನುಷಕುಮಾರ, ಸಾಯಿ ಜೀತೇಂದ್ರ, ವಿನಯ ಎಂ.ಕೆ., ಪ್ರಶಾಂತ ಡಿ. ಹಲವರು ಉಪಸ್ಥಿತರಿದ್ದರು.ನಾಳೆ ಫ.ಗು. ಹಳಕಟ್ಟಿ ಜನ್ಮದಿನಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವೇಶ್ವರ ಬಿಇಡಿ ಕಾಲೇಜು ಸಹಯೋಗದಲ್ಲಿ ಡಾ. ಫ.ಗು. ಹಳಕಟ್ಟೆಯವರ ಜನ್ಮದಿನ- ವಚನ ಸಂರಕ್ಷಣಾ ದಿನಾಚರಣೆ ಜು. 2ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಜರುಗಲಿದೆ.
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ ಪಾಲ್ಗೊಳ್ಳಲಿದ್ದಾರೆ.ಉಪನ್ಯಾಸಕ ಶೇಖರ ಭಜಂತ್ರಿ ಉಪನ್ಯಾಸಕರಾಗಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾರುತಿ ಶಿಡ್ಲಾಪೂರ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವೈ.ಬಿ. ಆಲದಕಟ್ಟಿ ಹಾಗೂ ಪ್ರಾಂಶುಪಾಲ ಮಂಜುನಾಥ ವಡ್ಡರ ಅವರು ಭಾಗವಹಿಸಲಿದ್ದಾರೆ.