ಕನ್ನಡಪ್ರಭ ವಾರ್ತೆ ಸುರಪುರ
ನಗರ ಸಮೀಪದ ಹಸನಾಪುರದಲ್ಲಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಘಟಕ ಹಾಗೂ ಕೃಷಿಕಲ್ಪಾ ಫೌಂಡೇಶನ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಉದ್ಯಮಶೀಲತೆಯ ಮನೋಭಾವ ಬೆಳೆಸುವುದು ಹಾಗೂ ಸಮಸ್ಯೆ ಪರಿಹಾರ’ ಎಂಬ ವಿಷಯದ ಕುರಿತು ಜಾಗೃತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಣ್ಣ ಮತ್ತು ಉದ್ಯಮ ಕೈಗಾರಿಕಗೆಗಳ (ಎಂಎಸ್ಎಂಇ) ಮಹತ್ವವನ್ನು ಅರಿತುಕೊಳ್ಳಬೇಕು. ಪ್ರಧಾನಮಂತ್ರಿ ಮುದ್ರಾ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಆರ್ಥಿಕ ನೆರವು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಂತ ಉದ್ಯಮ ಸ್ಥಾಪನೆಗೆ ಮುಂದಾಗಬೇಕು. ಉದ್ಯಮಶೀಲತೆಯ ಮೂಲಕ ಸ್ವಾಲಂಬನೆ ಸಾಧಿಸುವುದರ ಜತೆಗೆ ಇತರರಿಗೂ ಉದ್ಯೋಗ ಅವಕಾಶ ಕಲ್ಪಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕೃಷಿ ಕಲ್ಪಾ ಫೌಂಡೇಶನ್ ಯುವ ಉದ್ಯಮಶೀಲತಾ ವಿಭಾಗದ ಮುಖ್ಯಸ್ಥ ಅಭಿನಂದನ್ ಹಾಗೂ ಉಪಾಧ್ಯಕ್ಷ ಈರಣ್ಣ ರೊಟ್ಟಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಉದ್ಯಮಿ ಆರಂಭಿಸುವ ವಿಧಾನ, ನವೀನ ಆಲೋಚನೆಗಳ ಅಭಿವೃದ್ಧಿ, ಉದ್ಯಮದಲ್ಲಿನ ಸಮಸ್ಯೆಗಳನ್ನು ಗುರುತಿಸುವಿಕೆ ಹಾಗೂ ಅವುಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಪ್ರಾಂಶುಪಾಲ ಡಾ.ಶರಣಬಸಪ್ಪ ಸಾಲಿ, ವಿವಿಧ ವಿಭಾಗಗಳ ಮುಖ್ಯಸ್ಥರಾದ ಸಾಹೇಬಗೌಡ ಪಾಟೀಲ, ಶರಣಗೌಡ ಪಾಟೀಲ, ಪಾರ್ವತಿ ಪಾಟೀಲ, ಸಾಹೇಬಗೌಡ ಎಂ., ಪೂಜಾ ಎಚ್., ಸಿದ್ದನಗೌಡ ಪಾಟೀಲ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.