ಯುವಕರು ವಿವೇಚನೆಯಿಂದ ಜೀವನ ನಡೆಸಬೇಕು: ಕೆ.ಟಿ.ಹನುಮಂತು

KannadaprabhaNewsNetwork |  
Published : May 25, 2024, 12:59 AM IST
24ಕೆಎಂಎನ್ ಡಿ29 | Kannada Prabha

ಸಾರಾಂಶ

ತಂಬಾಕು ಉದ್ದಿಮೆಗಳು ತಮ್ಮ ಮುಂದಿನ ಗ್ರಾಹಕರನ್ನಾಗಿ ಯುವಕರನ್ನು ಸೆಳೆಯಲು ಹಲವು ಜಾಹೀರಾತುಗಳ ಮೂಲಕ ಚಲನಚಿತ್ರದ ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವವರರಿಂದ ಪರೋಕ್ಷವಾಗಿ ಪ್ರೇರೇಪಿಸುವ ಕೆಲಸ ಮಾಡುತ್ತಿರುವುದು ದುರಂತಕರ ಸಂಗತಿ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಂಬಾಕು ಉತ್ಪನ್ನಗಳ ಬಳಕೆಯಿಂದ ಪ್ರತಿ ವರ್ಷ ಪ್ರಪಂಚದಲ್ಲಿ 80 ಲಕ್ಷಕ್ಕೂ ಹೆಚ್ಚು ಜನ ಮರಣ ಹೊಂದುತ್ತಿದ್ದಾರೆ ಎಂದು ಅಲಯನ್ಸ್ ಸಂಸ್ಥೆ ಜಿಲ್ಲಾ ರಾಜ್ಯಪಾಲ ಕೆ.ಟಿ.ಹನುಮಂತು ಹೇಳಿದರು.

ತಾಲೂಕಿನ ಕೊಡಿಯಾಲ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಇಂಟರ್ ನ್ಯಾಷನಲ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ವಿನಾಯಕ ಐಟಿಐ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ತಂಬಾಕು ಉದ್ದಿಮೆಗಳು ತಮ್ಮ ಮುಂದಿನ ಗ್ರಾಹಕರನ್ನಾಗಿ ಯುವಕರನ್ನು ಸೆಳೆಯಲು ಹಲವು ಜಾಹೀರಾತುಗಳ ಮೂಲಕ ಚಲನಚಿತ್ರದ ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವವರರಿಂದ ಪರೋಕ್ಷವಾಗಿ ಪ್ರೇರೇಪಿಸುವ ಕೆಲಸ ಮಾಡುತ್ತಿರುವುದು ದುರಂತಕರ ಸಂಗತಿ ಎಂದರು.

ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಮಾತನಾಡಿ, ಯುವಕರು ವಿವೇಚನೆಯಿಂದ ಜೀವನ ನಡೆಸಬೇಕು. ತಂಬಾಕು ಉದ್ದಿಮೆಗಳ ಹಸ್ತಕ್ಷೇಪಕ್ಕೆ ಒಳಗಾಗಿ ಜೀವನ ಹಾಳು ಮಾಡಿಕೊಳ್ಳದೆ ತಂಬಾಕು ಮುಕ್ತ ಜೀವನ, ಸಮಾಜ ನಿರ್ಮಿಸಬೇಕು ಎಂದು ವಿನಂತಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ಟಿ ಮಂಜುನಾಥ್ ಮಾತನಾಡಿ, ಯುವಕರು ತಮ್ಮ ಭವಿಷ್ಯವನ್ನು ಉತ್ತಮಗೊಳಿಸಲು ತಂಬಾಕು ಉತ್ಪನ್ನಗಳಿಗೆ ದಾಸರಾಗದೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಮಾತನಾಡಿ, ಪ್ರತಿಯೊಬ್ಬ ಪ್ರಜೆಗೂ ಜೀವ, ಜೀವನ ಎರಡು ಮುಖ್ಯ ಇಂತಹ ಆರೋಗ್ಯವನ್ನು ಕಾಪಾಡಿಕೊಳ್ಳಲು ತಂಬಾಕು ಉತ್ಪನ್ನಗಳ ಬಳಕೆಯ ದಾಸರಾಗದೆ ಆರೋಗ್ಯಯುತ ಜೀವನ ನಡೆಸಲು ತಿಳಿಸಿದರು.

ಇದಕ್ಕೂ ಮೊದಲು ವಿನಾಯಕ ಐಟಿಐ ಕಾಲೇಜು ವಿದ್ಯಾರ್ಥಿಗಳಿಂದ ಜನಜಾಗೃತಿ ಜಾತ ಹಮ್ಮಿಕೊಂಡು ಗ್ರಾಮದ ಮುಖ್ಯ ರಸ್ತೆಗಳಲ್ಲಿ ಜಾತ ನಡೆಸಿ ಸಾರ್ವಜನಿಕರಿಗೆ ಕರಪತ್ರ ವಿತರಿಸುವ ಮೂಲಕ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಅನಾನುಕೂಲಗಳ ಬಗೆಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಅಲಯನ್ಸ್ ಸಂಸ್ಥೆ ಚಂದ್ರಶೇಖರ, ಸನ್ಮತಿ, ಹೊಂಬೆಗೌಡ್ರ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರು, ಐಟಿಐ ಕಾಲೇಜಿನ ಉಪನ್ಯಾಸಕ ಸೋಮರಾಜು ಸೇರಿದಂತೆ ಇತರರು ಇದ್ದರು.

PREV

Recommended Stories

ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಸಿಎಂಗೆ ಕಣ್ಣು ಪರೀಕ್ಷೆ ನಡೆಸಿ ಎರಡು ಕನ್ನಡಕ ಕೊಟ್ಟ ಶಾಸಕ ಶ್ರೀನಿವಾಸ್‌