ಯುವಕರು ಸ್ವಯಂ ಉದ್ಯೋಗದತ್ತ ಗಮನಹರಿಸಲಿ: ಮುಪ್ಪಿನ ಬಸವಲಿಂಗ ಶ್ರೀಗಳು

KannadaprabhaNewsNetwork |  
Published : Jul 12, 2026, 03:15 AM IST
ಕಾರ್ಯಕ್ರಮವನ್ನು ಶ್ರೀಗಳು ಉದ್ಘಾಟಿಸಿದರು.  | Kannada Prabha

ಸಾರಾಂಶ

ಜೀವನದ ಮೌಲ್ಯವು ಹುದ್ದೆ, ಅಧಿಕಾರ ಅಥವಾ ಸಂಪತ್ತಿನಲ್ಲಿ ಅಡಗಿಲ್ಲ. ಬದುಕಿನ ಕೊನೆಯಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲದೆ ಆತ್ಮತೃಪ್ತಿಯಿಂದ ಬದುಕಿರುವುದೇ ನಿಜವಾದ ಯಶಸ್ಸು ಎಂದು ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಶ್ರೀಗಳು ಹೇಳಿದರು.

ಗದಗ: ಜೀವನದ ಮೌಲ್ಯವು ಹುದ್ದೆ, ಅಧಿಕಾರ ಅಥವಾ ಸಂಪತ್ತಿನಲ್ಲಿ ಅಡಗಿಲ್ಲ. ಬದುಕಿನ ಕೊನೆಯಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲದೆ ಆತ್ಮತೃಪ್ತಿಯಿಂದ ಬದುಕಿರುವುದೇ ನಿಜವಾದ ಯಶಸ್ಸು ಎಂದು ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಶ್ರೀಗಳು ಹೇಳಿದರು.

ಶುಕ್ರವಾರ ಗದಗ ನಗರದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಬನಪ್ಪ ಸಂಕಪ್ಪ ಸಂಕಣ್ಣವರ ಸಭಾಭವನದಲ್ಲಿ ಲಿಂ. ಪಂಚಾಕ್ಷರಯ್ಯ ಸಂಶಿಮಠ ಅವರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ವ್ಯಕ್ತಿಯ ಬದುಕಿನ ಗುಣಮಟ್ಟ, ಸಮಾಜಕ್ಕೆ ನೀಡುವ ಕೊಡುಗೆ ಹಾಗೂ ಆತ್ಮತೃಪ್ತಿಯೇ ಜೀವನದ ನಿಜವಾದ ಮೌಲ್ಯವಾಗಿದೆ. ಇಂದಿನ ಯುವಜನತೆ ಸರ್ಕಾರಿ ಉದ್ಯೋಗವನ್ನೇ ಅಂತಿಮ ಗುರಿಯನ್ನಾಗಿಸಿಕೊಳ್ಳುವ ಬದಲು ಸ್ವಯಂ ಉದ್ಯೋಗ, ವಾಣಿಜ್ಯ ಹಾಗೂ ಉದ್ಯಮಶೀಲತೆಯತ್ತ ಮುಖ ಮಾಡಿ ಉದ್ಯೋಗ ಸೃಷ್ಟಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸರ್ಕಾರ ಎಲ್ಲರಿಗೂ ಉದ್ಯೋಗ ಕಲ್ಪಿಸಲು ಸಾಧ್ಯವಿಲ್ಲ. ಆದ್ದರಿಂದ ಧೈರ್ಯ, ಸ್ವಾವಲಂಬನೆ ಮತ್ತು ಸ್ವತಂತ್ರ ಚಿಂತನೆಯೊಂದಿಗೆ ಹೊಸ ಅವಕಾಶಗಳನ್ನು ಸೃಷ್ಟಿ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಸಿದ್ರಾಮಯ್ಯ ಸಂಶಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಲಿಂ. ಪಂಚಾಕ್ಷರಯ್ಯ ಸಂಶಿಮಠ ಸ್ಮರಣಾರ್ಥ ಜೀವನದಲ್ಲಿ ಮೌಲ್ಯಗಳು ದತ್ತಿ ಉಪನ್ಯಾಸ ಕೇವಲ ಉಪನ್ಯಾಸಕ್ಕೆ ಸ್ಥಿಮಿತಿಗೊಳ್ಳದೆ ವಾಸ್ತವಿಕವಾಗಿ ಜೀವನದಲ್ಲಿ ಮೌಲ್ಯಗಳನ್ನು ಇಟ್ಟುಕೊಂಡವರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸುವುದು ಅತೀವ ಸಂತೋಷದ ಸಂಗತಿಯಾಗಿದೆ ಎಂದರು.

ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳು, ಸೈಕ್ಲಿಸ್ಟ್‌ಗಳು ಮತ್ತು ತರಬೇತುದಾರರು, ಚಾರ್ಟರ್ಡ್ ಅಕೌಂಟೆಂಟ್‌ಗಳು, ರಕ್ತದಾನ, ಶಿಕ್ಷಣ, ವಿಶೇಷಚೇತನರ ಸೇವೆ, ಆರೋಗ್ಯ ಜಾಗೃತಿ, ರೋಟರಿ, ಲಯನ್ಸ್ ಕ್ಲಬ್ ಪದಾಧಿಕಾರಿಗಳನ್ನು ಸಮಾಜ ಸೇವಕರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಶ್ರೀಧರ ಧರ್ಮಾಯತ, ಪ್ರವೀಣ ವಾರಕರ, ರಮೇಶ ಶಿಗ್ಲಿ, ಸರೋಜಾ ಕುಲಕರ್ಣಿ, ಮಾಲತಿ ಇನಾಮತಿ, ಪೂಜಾ ಗುಗ್ಗರಿ, ಕವಿತಾ ದಂಡಿನ ಮಾತನಾಡಿದರು.

ಚೇಂಬರ್ ಗೌರವ ಕಾರ್ಯದರ್ಶಿ ಚನ್ನವೀರಪ್ಪ ಹುಣಸಿಕಟ್ಟಿ ಸ್ವಾಗತಿಸಿದರು. ಈಶಣ್ಣ ಮುನವಳ್ಳಿ, ವಿ.ಕೆ. ಗುರುಮಠ, ವಿಜಯಕುಮಾರ ಮಾಟಲದಿಣ್ಣಿ, ದತ್ತು ಬೇವಿನಕಟ್ಟಿ, ಸಂಸ್ಥೆಯ ಉಪಾಧ್ಯಕ್ಷ ಜಯದೇವ ಮೆಣಸಗಿ, ಪ್ರಕಾಶ ಉಗಲಾಟದ, ಸಿದ್ರಾಮಪ್ಪ ಉಮಚಗಿ, ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಅರವಿಂದ ಕಾಮತ, ಚಂದ್ರು ಬಾಳಿಹಳ್ಳಿಮಠ ಹಾಗೂ ಸದಸ್ಯರು ಗಣ್ಯರು, ಉದ್ಯಮಿಗಳು ಹಾಜರಿದ್ದರು. ರಾಘವೇಂದ್ರ ಕಾಲವಾಡ ಪರಿಚಯಿಸಿದರು ದಾನಯ್ಯ ಗಣಾಚಾರಿ ವಂದಿಸಿದರು.ದೇಹ ಸಂಪತ್ತು, ವಿಚಾರ ಸಂಪತ್ತು ಮತ್ತು ಚೈತನ್ಯವೇ ವ್ಯಕ್ತಿಯ ನಿಜವಾದ ಸಂಪತ್ತು. ಚೈತನ್ಯವಿಲ್ಲದ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಗೆ ಸಮಾಜದಲ್ಲಿ ಸ್ಥಾನವಿಲ್ಲ. ಸಮಾಜದ ಸ್ಪಂದನೆಗೆ ಸ್ಪಂದಿಸುವ ಸಂಸ್ಥೆಗಳೇ ಶಾಶ್ವತವಾಗಿ ಉಳಿಯುತ್ತವೆ ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಶ್ರೀಗಳು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹದಗೆಟ್ಟ ಭಟ್ಕಳ ಸರ್ಕಾರಿ ಆಸ್ಪತ್ರೆ ರಸ್ತೆ, ಗಿಡ ನೆಟ್ಟು ಪ್ರತಿಭಟನೆ
ಹುಲಿ ಗಣತಿ ಕ್ಯಾಮೆರಾ ಕಳ್ಳನ ಬಂಧನ, ಎರಡು ಕ್ಯಾಮೆರಾ ವಶ