ಯುವಜನತೆ ಓದು, ಜ್ಞಾನಾರ್ಜನೆಗೆ ಆದ್ಯತೆ ನೀಡಿ: ಬಾಬು ವಾಲಿ

KannadaprabhaNewsNetwork |  
Published : Oct 02, 2026, 01:30 AM IST
ಚಿತ್ರ 1ಬಿಡಿಆರ್57 | Kannada Prabha

ಸಾರಾಂಶ

ಯುವ ಜನರು ಓದು ಮತ್ತು ಜ್ಞಾನಾರ್ಜನೆಗೆ ಆದ್ಯತೆ ನೀಡುವ ಮೂಲಕ ನಮ್ಮ ನಾಡಿನ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಅರಿತು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೆ.ಪಿ.ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಾಬು ವಾಲಿ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಬೀದರ್

ಯುವ ಜನರು ಓದು ಮತ್ತು ಜ್ಞಾನಾರ್ಜನೆಗೆ ಆದ್ಯತೆ ನೀಡುವ ಮೂಲಕ ನಮ್ಮ ನಾಡಿನ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಅರಿತು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೆ.ಪಿ.ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಾಬು ವಾಲಿ ಕರೆ ನೀಡಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಕಲಬುರಗಿ, ಜನಪದ ಕಲಾವಿದರ ಬಳಗ, ಮಹರ್ಷಿ ವಾಲ್ಮೀಕಿ ಸೋಶಿಯಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಹಾಗೂ ರಂಗ ತರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಕಾಲಚಕ್ರ’ ನಾಟಕದ ಸಮಾರೋಪ ಸಮಾರಂಭಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಆಧುನಿಕ ಜೀವನಶೈಲಿಯಲ್ಲಿ ಅನಗತ್ಯವಾಗಿ ಮೊಬೈಲ್ ಬಳಸಿ ಅಮೂಲ್ಯ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ ಎಂದರು.

ಜನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ್ ಸೋನಾರೆ ಮಾತನಾಡಿ, ಯುವ ಜನರಲ್ಲಿ ಸಾಂಸ್ಕೃತಿಕ ಅರಿವು ಮೂಡಿಸುವ ಅಗತ್ಯವಿದೆ. ಅರ್ಥಪೂರ್ಣ ನಾಟಕಗಳ ಪ್ರದರ್ಶನದಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಸಂಗೀತ ನೃತ್ಯ ಅಕಾಡೆಮಿಯ ‘ಕರ್ನಾಟಕ ಕಲಾಶ್ರೀ’ ಗೌರವ ಪ್ರಶಸ್ತಿಗೆ ಆಯ್ಕೆಯಾದ ಕಲ್ಯಾಣರಾವ ಪಾಟೀಲ್ ಗುಮ್ಮಾ ಅವರನ್ನು ಸನ್ಮಾನಿಸ ಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಮಹರ್ಷಿ ವಾಲ್ಮೀಕಿ ಟ್ರಸ್ಟ್ ಅಧ್ಯಕ್ಷ ಸುನೀಲ ಭಾವಿ ಕಟ್ಟಿ, ರಂಗ ತರಂಗ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಮುದಾಳೆ, ಉಪನ್ಯಾಸಕಿ ಪ್ರೀತಿ ಸೇರಿದಂತೆ ಸಂಗಮೇಶ್ ಬೆಲ್ದಾಳ, ಸುಭಾಷರಾವ್ ಪಾಟೀಲ್ ಗುಮ್ಮಾ, ಮಹೇಶ ಧುಪೆ ವೇದಿಕೆಯಲ್ಲಿದ್ದರು. ಸುನೀಲ ಭಾವಿಕಟ್ಟಿ ಸ್ವಾಗತಿಸಿದರೆ, ಎಂ.ಪಿ.ಮುದಾಳೆ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಜೀವಂತ ಭಾಷೆಯಾಗಿಸಲು ಸಂಕಲ್ಪ: ಮೀರಾ ಶಿವಲಿಂಗಯ್ಯ
ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಿ: ಮಹಾಲಿಂಗೇಗೌಡ