ಯುವಜನತೆ ಉತ್ತಮ ಭವಿಷ್ಯ ನಿರ್ಮಾಣದತ್ತ ಹೆಜ್ಜೆ ಹಾಕಬೇಕು: ಜಿಲ್ಲಾಧಿಕಾರಿ

KannadaprabhaNewsNetwork |  
Published : Sep 22, 2024, 01:59 AM IST
ಯುವ21 | Kannada Prabha

ಸಾರಾಂಶ

ಉಡುಪಿ ಅಮೃತ್ ಗಾರ್ಡನ್‌ನಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಉಡುಪಿ

ಯುವ ಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ತಮ್ಮ ಶೈಕ್ಷಣಿಕ ಬೆಳವಣಿಗೆಯ ಕಡೆ ಗಮನಹರಿಸಿ, ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಹೇಳಿದರು.ಅವರು ಶನಿವಾರ ನಗರದ ಅಮೃತ್ ಗಾರ್ಡನ್‌ನಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿದಾಗ ನಮ್ಮ ದೇಶವನ್ನು ಹೊರತುಪಡಿಸಿ ವಿವಿಧೆಡೆ ಸಾಮಾಜಿಕ ಅಸ್ಥಿರತೆ ಇದ್ದು, ಇದರ ಅನೇಕ ಪರಿಣಾಮ ಯುವಜನರ ಮೇಲೆ ಉಂಟಾಗುತ್ತದೆ. ನಮ್ಮ ದೇಶದಲ್ಲಿ ಬೇಧ, ಭಾವ, ಜಾತಿ ತಾರತಮ್ಯವಿಲ್ಲದೇ ಸಂವಿಧಾನದ ಆಶಯದಂತೆ ನಾವು ಭಾರತೀಯರು, ನಾವೆಲ್ಲರೂ ಒಂದೇ ಎಂಬ ಸಮಾನತೆಯ ಭಾವನೆಯನ್ನು ಬೆಳೆಸಿಕೊಂಡು ಜೀವನ ನಡೆಸಬೇಕು ಎಂದರು.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಯುವ ಜನೋತ್ಸವ ಕಾರ್ಯಕ್ರಮವು ರಾಷ್ಟ್ರೀಯ ಏಕೀಕರಣದ ಪರಿಕಲ್ಪನೆ, ಕೋಮು ಸೌಹಾರ್ದತೆಯ ಮನೋಭಾವ, ಸಹೋದರತ್ವ, ಧೈರ್ಯ ಮತ್ತು ಸಾಹಸವನ್ನು ಪ್ರದರ್ಶಿಸುವ ವೇದಿಕೆಯಾಗಿದೆ. ಇದನ್ನು ಯುವಜನರು ಸಮರ್ಪಕ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.ರೆಡ್ ಕ್ರಾಸ್ ರಾಜ್ಯ ಶಾಖೆ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ ಮಾತನಾಡಿ, ಯಶಸ್ಸು, ಸಾಧನೆ, ಪ್ರಗತಿಯನ್ನು ಸಾಧಿಸಲು ಸಮಾಜದಲ್ಲಿ ಶಾಂತಿ, ಸ್ನೇಹ, ಬಾಂಧವ್ಯ, ಸೌಹಾರ್ದತೆ ಅಗತ್ಯವಾಗಿದೆ. ಯುವ ಜನರು ದೇಶದ ಭವಿಷ್ಯ. ಯುವ ಜನರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಜನಪದ ಹಾಡು, ಕಥೆ ಬರೆಯುವುದು, ಕವಿತೆ ಬರೆಯುವುದು, ಚಿತ್ರಕಲೆ, ಭಿತ್ತಿ ಪತ್ರ ತಯಾರಿಕೆ ಹಾಗೂ ಘೋಷಣೆ ಸ್ಪರ್ಧೆಗಳು ನಡೆದವು. ರೆಡ್‌ಕ್ರಾಸ್‌ನ ಕಾರ್ಯದರ್ಶಿ ಗಣನಾಥ್ ಎಕ್ಕಾರು, ಲಯನ್ಸ್ ಅಮೃತ್ ಉಡುಪಿಯ ಭಾರತಿ ಹರೀಶ್, ಗೌರವ ಖಜಾಂಚಿ ರಮಾದೇವಿ, ರೆಡ್‌ಕ್ರಾಸ್ ಪದಾಧಿಕಾರಿಗಳಾದ ಬಾಲಕೃಷ್ಣ ಶೆಟ್ಟಿ ಮತ್ತು ಟಿ. ಚಂದ್ರಶೇಖರ್, ಲಯನ್ಸ್ ಕ್ಲಬ್ ಅಮೃತ್‌ ಪದಾಧಿಕಾರಿಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!