ಯುವಜನತೆ ತಂಬಾಕು ಸೇವನೆಯಿಂದ ದೂರವಿರಿ

KannadaprabhaNewsNetwork |  
Published : Nov 19, 2025, 01:15 AM IST
ಪೋಟೊ18.16: ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ

ಕೊಪ್ಪಳ: ನಗರದ ಸುರಭಿ ಮಧ್ಯವ್ಯಸನ ಮುಕ್ತಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶ ಹಾಗೂ ಸುರಭಿ ಮಧ್ಯವ್ಯಸನ ಮುಕ್ತಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ 60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಅಭಿಯಾನದ ಅಂಗವಾಗಿ ತಂಬಾಕು ಅಂಗಡಿಗಳ ಮೇಲೆ ಪರಿಶೀಲನಾ ದಾಳಿ ನಡೆಸಿ ತಂಬಾಕು ಸೇವನೆಯಿಂದಾಗುವ ಆರೋಗ್ಯ ಅಪಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ ಸಂಗಪ್ಪ ಮಂಟಗೇರಿ ಮಾತನಾಡಿ, ತಂಬಾಕು ಮುಕ್ತ ಯುವ ಅಭಿಯಾನವು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವಕರಿಗೆ ಅರಿವು ಮೂಡಿಸುವುದಾಗಿದೆ. ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದನ್ನು ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸಿದಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.

ತಂಬಾಕು ಮುಕ್ತ ಪರಿಸರ ನಿರ್ಮಿಸಲು ಎಲ್ಲರೂ ಸಹಕರಿಸಬೇಕು. ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸುತ್ತದೆ. ಆದ್ದರಿಂದ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.

ಎನ್.ಟಿ.ಸಿ.ಪಿ ಸಮಾಜ ಕಾರ್ಯಕರ್ತೆ ಸರಸ್ವತಿ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಿಗರೇಟ್, ಬೀಡಿ, ಸಿಗಾರ್, ಹುಕ್ಕಾ ತಂಬಾಕು ವಿಧಗಳಾಗಿವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ತಂಬಾಕಿನಲ್ಲಿ ನಿಕೋಟಿನ್ ಎಂಬ ವಿಷಕಾರಕ ಪದಾರ್ಥ ಇರುತ್ತದೆ. ಇದರಲ್ಲಿ 4000 ದಿಂದ 7000 ಅಪಾಯಕಾರಿ ರಾಸಾಯನಿಕ ವಿಷಾನಿಲಗಳು ಇರುತ್ತವೆ. ಮಹಿಳೆಯರಲ್ಲೂ ತಂಬಾಕು ಸೇವನೆಯಿಂದ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್, ಕಡಿಮೆ ತೂಕವಿರುವ ಮಗುವಿನ ಜನನ ಹಾಗೂ ಶಿಶುಮರಣ ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ. ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಇಂದಿನ ಯುವ ಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.

ಯೋಜನಾ ಸಂಯೋಜಕ ಭರಮಪ್ಪ ಮಾತನಾಡಿ, ತಂಬಾಕು ತ್ಯಜಿಸುವುದರಿಂದ ಮತ್ತು ವ್ಯಸನಿಗಳು ನಿಲ್ಲಿಸಿದ ಕ್ಷಣದಿಂದ ಶ್ವಾಸಕೋಶ ಮತ್ತು ಹೃದಯ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದ ಸಿಬ್ಬಂದಿ ವರ್ಗದವರು ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ