ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಲ್ಲಿ ಶನಿವಾರ ಸಪ್ನ ಬುಕ್ ಹೌಸ್ ಆಯೋಜಿಸಿದ್ದ ಪುಸ್ತಕ ಜಾತ್ರೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೂಡಲೇ ಆರಂಭಿಸಬೇಕು. ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಸರ್ಕಾರ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಮಾಡಬೇಕು ಎಂದರು.
ನಾಲ್ಕೈದು ವರ್ಷಗಳಿಂದ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲವೆಂದು ಕೇಳಿದ್ದೇನೆ. ಪುಸ್ತಕಗಳನ್ನು ಖರಿಸಲಾಗದಷ್ಟು ದುಸ್ಥಿತಿಯಲ್ಲಿ ರಾಜ್ಯ ಇಲ್ಲ. ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ನಮ್ಮ ಸುದೈವಕ್ಕೆ ಕನ್ನಡದಲ್ಲಿ ಅತ್ಯಂತ ವಿಪುಲ, ಶ್ರೇಷ್ಠ ಸಾಹಿತ್ಯದ ಆಗರವೇ ಇದೆ. ಅನೇಕ ಮಹಾನ್ ಸಾಹಿತಿಗಳು, ಕವಿಗಳು, ಬರಹಗಾರರು ಕನ್ನಡ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ. ತರಾಸು ಅವರ ದುರ್ಗಾಸ್ತಮಾನ ಕಾದಂಬರಿಯನ್ನು ಅನೇಕ ಸಲ ಓದಿದ್ದೇನೆ. ಈಗ ಮತ್ತೊಮ್ಮೆ ಓದುತ್ತಿದ್ದೇನೆ ಎಂದು ಹೇಳಿದರು.ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ನಟ ಅನಿರುದ್ಧ, ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ನಟಿ ಅಂಕಿತ ಅಮರ್, ಸಪ್ನ ಬುಕ್ ಹೌಸ್ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ ಮತ್ತಿತರರು ಇದ್ದರು.