ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರ ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಶನ್ ಅಂಡ್ ಅಡ್ವರ್ಟೈಸಿಂಗ್ ಲಿ. ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಇನಕ್ಯುಬೇಶನ್ ವಿಷಯ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬೇರೆಯವರ ಬಳಿ ಕೆಲಸ ಮಾಡುವುದರಿಂದ ನಿಮ್ಮ ಸಾಮರ್ಥ್ಯ ಗುರುತಿಸಿಕೊಳ್ಳುವ ಅವಕಾಶ ಕಡಿಮೆಯಾಗುತ್ತದೆ. ಸ್ವತಃ ಒಂದು ಉತ್ತಮ ಉದ್ಯಮ ಆಯ್ಕೆ ಮಾಡಿಕೊಂಡು ಶ್ರದ್ಧೆ ಹಾಗೂ ಪರಿಶ್ರಮದಿಂದ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಭಾರತದ ಆರ್ಥಿಕತೆಯ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದು, ದೇಶದ ಒಟ್ಟು ರಫ್ತು ವ್ಯವಹಾರದಲ್ಲಿ ಶೇ.45 ಪಾಲು ಹೊಂದಿದೆ. ಕೊರೊನಾ ಸಮಯದಲ್ಲಿ ಹಿನ್ನೆಡೆ ಅನುಭವಿಸಿದಾಗ ಭಾರತ ಸರ್ಕಾರ ಯೋಜನೆ ಪ್ರಾರಂಭಿಸಿತು. ಇದರ ಉದ್ದೇಶ ಚಟುವಟಿಕೆಗೆ ವೇಗ ನೀಡುವುದು. ಇಂದಿನ ಯುವಕರು ಮೇಕ್ ಇನ್ ಇಂಡಿಯಾ ಸೇರಿದಂತೆ ವಿವಿಧ ಯೋಜನೆಗಳ ಸದುಪಯೋಗ ಪಡೆದು ತಮ್ಮ ಉದ್ಯಮ ಬಲಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದ ಮುಖ್ಯಸ್ಥೆ ಜೆ.ಡಿ. ಮಲ್ಲಾಪೂರ ಮಾತನಾಡಿ, ಉದ್ಯಮದ ಕುರಿತ ಅರಿವು ಪಡೆಯಲು ವಿದ್ಯಾರ್ಥಿಗಳು ಬೆಂಗಳೂರಿನಂತಹ ಮಹಾನಗರಗಳಿಗೆ ತೆರಳಬೇಕಾಗುತ್ತಿತ್ತು. ಆದರೆ ಈ ಕಾರ್ಯಾಗಾರದಿಂದ ಅಲ್ಲಿ ಕಲಿಯಬೇಕಾದ ವಿಷಯಗಳನ್ನು ಇಲ್ಲಿ ತಿಳಿದುಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿದೆ ಎಂದು ಹೇಳಿದರು.