ದಾಬಸ್‌ಪೇಟೆ: ಅಪರಿಚಿತ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುಟ್ಯೂಬರ್ ಮೃತಪಟ್ಟಿರುವ ದುರ್ಘಟನೆ ಕುಲುವನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಯುಟ್ಯೂಬರ್ ವೆಂಕಟೇಶ್(43) ಮೃತ ದುರ್ದೈವಿ. ಕಾರು ಬೆಂಗಳೂರಿನಿಂದ ತುಮಕೂರು ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಸಂಚಾರ ಪೊಲೀಸರು ಅಪರಿಚಿತ ವಾಹನಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.