ತಮಿಳನಾಡು ರಾಜ್ಯದ ಪಂಜವರ್ಣಮ್, ಸುಮದಿ ಮತ್ತು ರಘು ಎಂಬವರೇ ಬಂಧಿತ ಆರೋಪಿಗಳು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮೈಸೂರು
ಕೆಎಸ್ಆರ್ ಟಿಸಿ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಲಷ್ಕರ್ ಠಾಣೆಯ ಪೊಲೀಸರು ಬಂಧಿಸಿ, 16.50 ಲಕ್ಷ ರೂ. ಮೌಲ್ಯದ 125 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ತಮಿಳನಾಡು ರಾಜ್ಯದ ಪಂಜವರ್ಣಮ್, ಸುಮದಿ ಮತ್ತು ರಘು ಎಂಬವರೇ ಬಂಧಿತ ಆರೋಪಿಗಳು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಕಳೆದ ಜ.24 ರಂದು ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಲಷ್ಕರ್ ಠಾಣೆಯ ಪೊಲೀಸರು, ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಕೆ.ಎಸ್. ಸುಂದರ್ ರಾಜ್, ದೇವರಾಜ ಉಪ ವಿಭಾಗದ ಎಸಿಪಿ ಕೆ. ರಾಜೇಂದ್ರ ಅವರ ಮಾರ್ಗದರ್ಶನದಲ್ಲಿ ಲಷ್ಕರ್ ಠಾಣೆಯ ಇನ್ಸ್ ಪೆಕ್ಟರ್ ಟಿ.ಎಸ್. ಲೋಲಾಕ್ಷಿ, ಎಸ್ಐಗಳಾದ ಎಂ. ರಾಧಾ, ಎನ್.ವಿ. ರಂಗಸ್ವಾಮಿ, ಸಿಬ್ಬಂದಿ ಸುರೇಶ, ರವಿಕುಮಾರ, ಮಂಜುನಾಥ, ಚೌಡಪ್ಪ ಪಾಸೀಗರ್, ಅಬ್ದುಲ್ ರೆಹಮಾನ್, ಅಶ್ವಿನಿ ಹೆಳವರ್, ಸಿಡಿಆರ್ ಟೆಕ್ನಿಕಲ್ ಸೆಲ್ ನ ಕುಮಾರ್ ಈ ಪತ್ತೆ ಮಾಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.