ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ

KannadaprabhaNewsNetwork |  
Published : Jun 25, 2025, 11:47 PM IST
ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ | Kannada Prabha

ಸಾರಾಂಶ

ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ ಸಂಘಟನೆಗಳು ಮಾಡುವ ಒಳ್ಳೆಯ ಕೆಲಸಗಳನ್ನು ಬೇರೆಯವರಿಗೆ ತಿಳಿಸುವ ಮೂಲಕ ಸಂಘಟನೆಯನ್ನು ಬಲಪಡಿಸುವ ಕಾರ್ಯ ಆಗಬೇಕು. ಮುಂದಿನ ಪೀಳಿಗೆಗೆ ಮಾದರಿಯಾಗುವಂತಹ ಕಾರ್ಯಗಳನ್ನು ಹಮ್ಮಿಕೊಂಡಾಗ ಸದೃಢ ಸಮಾಜವನ್ನು ನಿರ್ಮಿಸಲು ಸಾಧ್ಯವಿದೆ ಎಂದು ನರಿಕೊಂಬು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್ ಹೇಳಿದರು.ಅವರು ಯುವವಾಹಿನಿ ಬಂಟ್ವಾಳ ಘಟಕದ 2025-26 ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ನಾರಾಯಣ ಗುರುಗಳು ಬಿಲ್ಲವ ಸಮಾಜಕ್ಕೆ ಸೀಮಿತ ಅಲ್ಲ. ಅವರ ಎಲ್ಲಾ ಸಮಾಜಕ್ಕೂ, ಎಲ್ಲಾ ಕಾಲಕ್ಕೂ ಸಲ್ಲುವ ಶ್ರೇಷ್ಠ ಗುರುಗಳು ಎಂದು ತಿಳಿಸಿದರು.ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಅವರು ಮಾತನಾಡಿ ಬಂಟ್ವಾಳ ಯುವವಾಹಿನಿ ಘಟಕ ಅತ್ಯುತ್ತಮ ವಾಗಿ ಕಾರ್ಯಕ್ರಮವನ್ನು ಸಂಘಟಿಸಿ ಮಾದರಿಯಾಗಿದೆ ಎಂದು ತಿಳಿಸಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಯುವ ಸಂಚಯ ವಾರ್ಷಿಕ ವಿಶೇಷಾಂಕ ಬಿಡುಗಡೆಗೊಳಿಸಿದರು. ಯುವ ವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು.ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಕಥೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನೂತನ ಅಧ್ಯಕ್ಷರಾಗಿ ನೈಬೇಲು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅಧಿಕಾರ ಸ್ವೀಕರಿಸಿದರು.ಕೋಶಾಧಿಕಾರಿ ಗೀತಾ ಜಗದೀಶ್ ಸ್ವಾಗತಿಸಿದರು, ಮಾಜಿ ಅಧ್ಯಕ್ಷ ಪ್ರೇಮನಾಥ ಕೆ. ಪ್ರಸ್ತಾವಿಸಿದರು. ಕಾರ್ಯದರ್ಶಿ ಚೇತನ್ ಮುಂಡಾಜೆ ವಾರ್ಷಿಕ ವರದಿ ಮಂಡಿಸಿದರು. ಆಯ್ಕೆ ಸಮಿತಿಯ ಹರೀಶ್ ಕೋಟ್ಯಾನ್ ಕುದನೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. ಯುವ ಸಂಚಯದ ಸಂಪಾದಕ ರಾಜೇಶ್ ಸುವರ್ಣ ವಾರ್ಷಿಕ ವಿಶೇಷಾಂಕವನ್ನು ಪರಿಚಯಿಸಿದರು. ಕಾರ್ಯದರ್ಶಿ ಮಧುಸೂದನ್ ಮದ್ವ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ