ವಕ್ಫ್‌ ನೋಟಿಸ್ ನೀಡಲು ಸಿಎಂಗೆ ಜಮೀರ ಕುಮ್ಮಕ್ಕು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

KannadaprabhaNewsNetwork |  
Published : Dec 06, 2024, 08:59 AM ISTUpdated : Dec 06, 2024, 12:01 PM IST
05ಕೆಪಿಎಲ್ಎನ್ಜಿ02  | Kannada Prabha

ಸಾರಾಂಶ

ಲಿಂಗಸುಗೂರಲ್ಲಿ ಬಿಜೆಪಿ ನಡೆಸಿದ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟದ ಸಮಾರಂಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

  ಲಿಂಗಸುಗೂರು  : ರೈತರು, ದೇವಸ್ತಾನ, ಮಠ-ಮಾನ್ಯಗಳ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾಗಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವವ ಜಮೀರ್‌ ಅಹ್ಮದ್‌ರವರ ಕುಮ್ಮಕ್ಕು ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. 

ಲಿಂಗಸುಗೂರು ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿದ್ದ ನಮ್ಮ ಭೂಮಿ ನಮ್ಮ ಹಕ್ಕು ಆಂದೋಲನ ಸಮಾರಂಭ ಉದ್ಘಾಟಿಸಿ ಮಾತನಾಡಿ ಅವರು, ಜನಪರವಾದ ಯಾವುದೇ ಹೋರಾಟ ಮಾಡದೇ ಅದೃಷ್ಟದ ಆಟದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ. ಅಲ್ಪ ಸಂಖ್ಯಾತರ ತುಷ್ಠೀಕರಣ ಮಾಡಲು ಮುಂದಾಗಿದ್ದಾರೆ. ರಾಜ್ಯದ ಜಿಲ್ಲಾಧಿಕಾರಿಗಳಿಗೆ ರಾತೋರಾತ್ರಿ ಪ್ರಭಾವ ಬೀರಿ ಸಾವಿರಾರು ವರ್ಷಗಳ ಇತಿಹಾಸ ಇರುವ ದೇವಸ್ಥಾನ ಮಠ-ಮಂದಿರ, ರೈತರ ಜಮೀನುಗಳ ಪಹಣಿ ದಾಖಲೆಯಲ್ಲಿ ವಕ್ಫ ಹೆಸರು ನಮೂದು ಮಾಡಿದ್ದಾರೆ. ಇದಕ್ಕೆ ಪ್ರಬಲವಾದ ಕಾರಣ ಏನೆಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಂಟಿ ಸಂಸದೀಯ ಸಮಿತಿ ಮೂಲಕ 1973-74 ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದರೂ ಇದರಿಂದ ಹೆದರಿ ರಾತೋರಾತ್ರಿ ರಾಜ್ಯ ಸರ್ಕಾರ ಹೇಯಕೃತ್ಯ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ವಿರೋಧಿ ಮುಖ್ಯಮಂತ್ರಿಗಳು 1973-74ರ ಅನ್ವಯ ಇರುವ ಕಾಯ್ದೆಗೆ ತಿದ್ದುಪಡಿ ತಂದು ರೈತರ ಜಮೀನು ರಕ್ಷಣೆ ಮಾಡಬೇಕು. ಇಲ್ಲದೇ ಹೋದರೆ ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ತಿಳಿಸಿದರು.ವಾಲ್ಮೀಕಿ ನಿಗಮದ ಹಗರಣ ನಡೆದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ತಮ್ಮ ಪಾತ್ರ ವಿಲ್ಲ ಎಂದು ಹೇಳಿದ್ದರು,

 ಆದರೆ ನಿವೇಶನಗಳನ್ನು ಸರ್ಕಾರಕ್ಕೆ ವಾಪಸ್ಸು ನೀಡಿರುವುದು ಹಗರಣದಲ್ಲಿ ಸಿದ್ದರಾಮಯ್ಯನವರು ಭಾಗಿಯಾಗಿ ದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ರಾಜ್ಯದ ರೈತರ ಪರವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನೂ ಹೋರಾಡಲಿದೆ ಎಂದು ತಿಳಿಸಿದರು.ಈ ವೇಳೆ ಶಾಸಕ ಮಾನಪ್ಪ ವಜ್ಜಲ್, ಗಂಗಾವತಿ ಶಾಸಕ ಜೆ.ಜನಾರ್ಧನರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಯಚೂರು ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಬಿಜೆಪಿ ತಾಲೂಕ ಅಧ್ಯಕ್ಷ ಅಯ್ಯಪ್ಪ ವಕೀಲ, ಶರಣಪ್ಪಗೌಡ ಜಾಡಲದಿನ್ನಿ, ಸೇರಿದಂತೆ ಮುಂತಾದವರಿದ್ದರು.ರಾಜ್ಯ ಸರ್ಕಾರದ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಗೆದ್ದಿರಬಹುದು. ಆದರೆ, ಸಾರ್ವತ್ರಿಕ ಚುನಾವಣೆಯಲ್ಲಿ ವಕ್ಫ್‌ ನೋಟಿಸ್ ನೀಡಿರುವುದರ ಪರಿಣಾಮ ಉಂಟಾಗುತ್ತದೆ. ರೈತರಿಗೆ ನೋಟಿಸ್ ನೀಡದ ಸರ್ಕಾರದ ಪಾಪದ ಕೊಡ ತುಂಬಿದೆ. ರೈತ ವಿರೋಧಿ ಸರ್ಕಾರ ಮುಂದಿನ ದಿನಗಳಲ್ಲಿ ನೆಲಕಚ್ಚಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಸಿಎಂ ರೇಸ್‌ನಲ್ಲಿ ಕಾಂಗ್ರೆಸ್‌ನ 10 ಮಂದಿ

ಲಿಂಗಸುಗೂರು: ರಾಜ್ಯದ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಒಳ ಒಪ್ಪಂದ ಆಗಿದೆ, ಆದರೆ ಈಗ ಮಾತನಾಡುವುದಿಲ್ಲ ಎಂದು ಹೇಳಿದ್ದು ಯಾವ ಪುಣ್ಯಾತ್ಮ? ನಾವಂತೂ ಹೇಳಿಲ್ಲ. ಹೀಗೆ ಹೇಳಿದ್ದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಲಿಂಗಸುಗೂರು ಪಟ್ಟಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ವಕ್ಫ್‌ ವಿರುದ್ಧ ಹೋರಾಟದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿದ್ದಾಗ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರರವರಿಗೆ ಮುಖ್ಯಮಂತ್ರಿಯಾಗಬೇಕೆಂದು ಹಠ ಇದೆ. ಹೇಗಾದರೂ ಮಾಡಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಮನಸ್ಸು ಗೆಲ್ಲಲು ಡಿಕೆಶಿ ಪ್ರಯತ್ನ ನಡೆಸಿದ್ದಾರೆ. ಆದರೆ ಡಿ.ಕೆ.ಶಿವಕುಮಾರರವರ ಪರಸ್ಥಿತಿ ನೆಟ್ಟಗಿಲ್ಲ ಎಂದು ತಿವಿದರು.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಒಳ ಒಳಗೆ ಬೇಗುದಿ ಇದೆ. ಅದು ಯಾವ ಹಂತಕ್ಕೆ ತಲುಪುತ್ತದೆ ಎಂಬುದು ಬರುವ ದಿನಗಳಲ್ಲಿ ಹೊರಗೆ ಬರುತ್ತದೆ. ಅಧಿವೇಶನದ ಮುಗಿದ ಬಳಿಕ ಪರಸ್ಥಿತಿ ಬಿಗಡಾಯಿಸಲಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ 8-10 ಜನರು ರೇಸ್‌ನಲ್ಲಿ ಇದ್ದಾರೆ. ಆದರೆ ಸಿಎಂ ಕುರ್ಚಿ ಒಂದೇ ಇದೆ ಎಂದು ಚುಚ್ಚಿದರು.

ಬಿಜೆಪಿಯಲ್ಲಿನ ಬಣಗಳ ಕುರಿತು ರಾಜ್ಯದ ಜನರು ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಇರುವುದು ಸತ್ಯ. ಆದರೆ ರಾಜ್ಯದಲ್ಲಿ ಪಕ್ಷದ ಸಂಘಟನೆಗಾಗಿ ನೂರಾರು ಕಾರ್ಯಕರ್ತರು ಅಹರ್ನಿಸಿ ಶ್ರಮಿಸುತ್ತಿದ್ದಾರೆ. ಗೊಂದಲ ಬಗೆಹರಿಯುತ್ತದೆ, ನಾನು ರಾಜ್ಯಾಧ್ಯಕ್ಷನಾದ ಮೇಲೆ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ಕೊಟ್ಟು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಎಂದರೆ ಪಕ್ಷ ಸಂಘಟಿಸಿ ಕಾರ್ಯಕರ್ತರು ಹುರಿದುಂಬಿಸುವುದಾಗಿದೆ. ಪಕ್ಷದಲ್ಲಿನ ಗೊಂದಲ ಕೇಂದ್ರದ ವರಿಷ್ಠ ನಾಯಕರು ಬಗೆಹರಿಸುತ್ತಾರೆ ಎಂದು ಇದೇ ವೇಳೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!