ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಇಲ್ಲಿನ ಕೊಡವ ಸಮಾಜ ಸಭಾಂಗಣದಲ್ಲಿ ಸೋಮವಾರ ನಡೆದ ಬಿಜೆಪಿಯ ಸೋಮವಾರಪೇಟೆ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಭ್ರಷ್ಟತೆಯನ್ನು ಪ್ರಶ್ನಿಸುವ, ಪರಿಣಾಮಕಾರಿಯಾಗಿ ಹೋರಾಟ ರೂಪಿಸುವ ಅಗತ್ಯವಿದ್ದು, ಯುವ ನಾಯಕರು ಹೋರಾಟಕ್ಕೆ ಇಳಿಯಬೇಕು. ಆ ಮೂಲಕ ೨೦೨೮ರ ಚುನಾವಣೆಯಲ್ಲಿ ಕೊಡಗಿನ ಎರಡೂ ಕ್ಷೇತ್ರಗಳಿಂದ ಯುವ ನಾಯಕರು ಶಾಸಕರಾಗಿ ಆಯ್ಕೆಯಾಗಬೇಕು ಎಂದು ಅವರು ಕರೆ ನೀಡಿದರು.ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳ ಮೂಲಕ ಯಾರಿಗೂ ಹಣ ಬರುತ್ತಿಲ್ಲ. ಈ ಗ್ಯಾರಂಟಿಗಳು ಕಾಂಗ್ರೆಸ್ ಎಲೆಕ್ಷನ್‌ಗಾಗಿ ಮಾಡಿದ ಗಿಮಿಕ್ ಎಂಬುದು ಜನರಿಗೆ ಮನದಟ್ಟಾಗಿದೆ. ಮಳೆಯಿಂದ ಹಾನಿಯಾದರೆ ಬಿಜೆಪಿ ಸರ್ಕಾರ ಲಕ್ಷ ಪರಿಹಾರ ನೀಡುತ್ತಿತ್ತು. ಈಗಿನ ಕಾಂಗ್ರೆಸ್ ಬಿಡಿಗಾಸೂ ನೀಡಿಲ್ಲ ಎಂದು ದೂರಿದರು.
ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ಬಿಜೆಪಿ ಸರ್ಕಾರವಿದ್ದಾಗ ೪೦ ಪರ್ಸೆಂಟ್ ಕಮಿಷನ್ ಸರ್ಕಾರ, ಪೇ ಸಿ.ಎಂ. ಎಂದು ಸುಳ್ಳು ಹೇಳಿದ್ದನ್ನು ಜನರು ನಂಬಿ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ಆರಂಭದಿಂದ ಇಲ್ಲಿಯವರೆಗೂ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ. ಇದಕ್ಕೆ ವಾಲ್ಮೀಕಿ ನಿಗಮ ಹಾಗೂ ಮೂಡಾ ನಿವೇಶನ ಹಗರಣಗಳೇ ಸಾಕ್ಷಿಯಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಬಿಜೆಪಿ ಉಪಾಧ್ಯಕ್ಷ ಎಚ್.ಕೆ. ಮಾದಪ್ಪ ಮಾತನಾಡಿದರು.
ಮಂಡಲ ಅಧ್ಯಕ್ಷ ಗೌತಮ್ ಗೌಡ ಅಧ್ಯಕ್ಷತೆ ವಹಿಸಿದ್ದರು.ಪಕ್ಷದ ಮುಖಂಡರಾದ ವಿ.ಕೆ. ಲೋಕೇಶ್, ಮಹೇಶ್ ಜೈನಿ, ಅಭಿಮನ್ಯು ಕುಮಾರ್, ಶುಶ್ರೂತ್ ಗೌಡ, ಮನುಕುಮಾರ್ ರೈ, ಮಚ್ಚಂಡ ಪ್ರಕಾಶ್, ಕವಿತಾ ವಿರೂಪಾಕ್ಷ, ಮಹೇಶ್ ತಿಮ್ಮಯ್ಯ ಮತ್ತಿತರರಿದ್ದರು.