ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ

KannadaprabhaNewsNetwork |  
Published : May 31, 2024, 02:27 AM ISTUpdated : May 31, 2024, 12:29 PM IST
ಹೊನ್ನಾಳಿ ಫೋಟೋ 30ಎಚ್.ಎಲ್.ಐ1.ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪರವಾಗಿ  ಮತಯಾಚಿಸಿದರು | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

 ಹೊನ್ನಾಳಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.

ಗುರುವಾರ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಭೋಜೇಗೌಡ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದ ಸಂದರ್ಭದಿಂದ ಇಲ್ಲಿಯವರೆಗೆ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಆತ್ಮಹತ್ಯೆಗೆ ಕಾರಣ ಕಂಡುಹಿಡಿದು ಸಾಲ ಮನ್ನಾ ಮಾಡುವುದು ಸೇರಿದಂತೆ ರೈತಪರ ಯೋಜನೆಗಳನ್ನು ರೂಪಿಸಬೇಕು ಎಂದರು.

ಅಮಾನತು ಆದೇಶ ಹಿಂಪಡೆಯಬೇಕು:

ಚನ್ನಗಿರಿ ಪೊಲೀಸ್‍ ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸರ ಮೇಲೆ ಹಲ್ಲೆ ನಡೆದರೂ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಂಡಿಲ್ಲ. ಬದಲಿಗೆ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಹಾಗೂ ಪೊಲೀಸ್‍ ಇನ್‌ಸ್ಪೆಕ್ಟರ್ ನಿರಂಜನ ಅವರನ್ನು ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಿ, ತುಷ್ಟೀಕರಣ ನೀತಿ ಅನುಸರಿಸಿರುವುದು ಖಂಡನೀಯ. ಸರ್ಕಾರ ಕೂಡಲೇ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ನಿಗಮದ ಬಹುಕೋಟಿ ಹಗರಣ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯ ಸಿಗಬೇಕಾದರೆ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಅವರು, ನೈಋತ್ಯ ಪದವೀಧರರ ಕ್ಷೇತ್ರದ ಮೈತ್ರಿ ಪಕ್ಷದ ಇಬ್ಬರು ಅಭ್ಯರ್ಥಿಗಳೂ ಜಯಭೇರಿ ಬಾರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಮುಖಂಡರಾದ ಶಾತರಾಜ್ ಪಾಟೀಲ್, ಸಿ.ಆರ್. ಶಿವಾನಂದ, ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ, ಹಾಗೂ ಉಪನ್ಯಾಸಕರು ಇದ್ದರು .

PREV

Recommended Stories

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು : 12ನೇ ಆವೃತ್ತಿ । 12 ತಂಡ, ಒಟ್ಟು 117 ಪಂದ್ಯ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’