ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ. ಇದಕ್ಕೆ ನೇಹಾ, ಅಂಜಲಿ ಕೊಲೆ ಪ್ರಕರಣಗಳೇ ಸಾಕ್ಷಿ. ಈ ಘಟನೆಗಳು ರಾಜ್ಯದ ಮಹಿಳಾ ಸಮೂಹವನ್ನು ಬೆಚ್ಚಿಬೀಳಿಸುವಂತೆ ಮಾಡಿದೆ ಎಂದು ಹರಿಹಾಯ್ದರು.ಬೆಳಗಾವಿಯ ವೆಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ, ರಾಣೇಬೆನ್ನೂರಿನ ಅರೆಮಲ್ಲಾಪುರದಲ್ಲಿ ಯುವತಿ ಜೊತೆ ಮಗ ಓಡಿ ಹೋಗಿದ್ದಾನೆಂದು 50 ವರ್ಷದ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ತಳಿಸಿದ ಪ್ರಕರಣ, ಹಾವೇರಿಯಲ್ಲಿ 7 ಮಂದಿ ಮುಸ್ಲಿಂ ಪುರುಷರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಗಳಿಂದ ತಲೆ ತಗ್ಗಿಸುವಂತಾಗಿದೆ ಎಂದರು.
ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿರುವ ಈ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದ ಹೆಣ್ಣುಮಕ್ಕಳು ತಕ್ಕ ಪಾಠಕಲಿಸಲಿದ್ದಾರೆ ಎಂದು ಕಿಡಿಕಾರಿದರು.