ನಕಲಿ ವೈದ್ಯರು-ನಕಲಿ ಔಷಧಿಗಳ ಕುರಿತು ಶೂನ್ಯ ಸಹಿಷ್ಣುತೆ

KannadaprabhaNewsNetwork |  
Published : Sep 13, 2026, 02:15 AM IST
12ಕೆಕೆಆರ್6:ಕೊಪ್ಪಳ ನಗರದ ಮಧುಶ್ರೀ ಗಾರ್ಡನ್ ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರತಿ ತಾಲೂಕು ಹಾಗೂ ಜಿಲ್ಲೆಗೆ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಕಂಡುಬಂದರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು.

ಹುಬ್ಬಳ್ಳಿ:

ನಕಲಿ ವೈದ್ಯರು ಹಾಗೂ ನಕಲಿ ಔಷಧಿಗಳ ಕುರಿತು ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುತ್ತಿದ್ದು, ಇಂತಹ ಪ್ರಕರಣಗಳು ಪತ್ತೆಯಾದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ತಾಲೂಕು ಹಾಗೂ ಜಿಲ್ಲೆಗೆ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಕಂಡುಬಂದರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಅಧಿಕಾರಿಗಳ ಗಮನಕ್ಕೆ ಬಾರದಂತೆ ಯಾವುದೇ ಕೆಲಸ ನಡೆಯಲು ಸಾಧ್ಯವಿಲ್ಲ. ನಕಲಿ ವೈದ್ಯರ ಪ್ರಕರಣ ಪತ್ತೆಯಾದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ಹೇಳಿದರು.

ನಕಲಿ ಔಷಧಿಗಳ ಮಾರಾಟದ ಕುರಿತು ಮಾಹಿತಿ ಬಂದ ತಕ್ಷಣ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆನ್‌ಲೈನ್‌ನಲ್ಲಿ ಔಷಧಿ ಮಾರಾಟಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಈ ಕುರಿತು ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಕುರಿತು ಮಾತನಾಡದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೂಚಿಸಿದ್ದಾರೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಖಾದರ್, ಸಿದ್ದರಾಮಯ್ಯ ಅವರು ಮುಂದುವರಿಯಬೇಕು ಎಂಬುದು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರ ಬಯಕೆಯಾಗಿದೆ. ಕಾರ್ಯಕರ್ತರ ಈ ಬಯಕೆಯನ್ನೇ ರಾಹುಲ್‌ ಗಾಂಧಿ ಅವರು ವ್ಯಕ್ತಪಡಿಸಿರಬಹುದು ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ಸೇರಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಇಡಿ ದಾಳಿಗೆ ಕಾಂಗ್ರೆಸ್ಸಿಗರೇ ಟಾರ್ಗೆಟ್‌

ಇಡಿ ಸೇರಿದಂತೆ ಕೇಂದ್ರದ ಆಧೀನದಲ್ಲಿರುವ ತನಿಖೆ ಸಂಸ್ಥೆಗಳಿಗೆ ಬರೀ ಕಾಂಗ್ರೆಸ್ಸಿಗರೇ ಟಾರ್ಗೆಟ್‌ ಆಗುತ್ತಿದ್ದಾರೆಂದು ಸಚಿವ ಯು.ಟಿ.ಖಾದರ್‌ ಟೀಕಿಸಿದರು.ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸತೀಶ ಜಾರಕಿಹೊಳಿ ಸಣ್ಣ ಸಮುದಾಯದಿಂದ ಬಂದಂಥ ರಾಜಕಾರಣಿ. ದೊಡ್ಡ ಸ್ಥಾನಕ್ಕೇರಿದ್ದಾರೆ. ಈಗ ಇ.ಡಿ. ದಾಳಿ ನಡೆದಿದೆ. ಆದರೆ ಕಾಂಗ್ರೆಸ್ಸಿಗರೇ ಟಾರ್ಗೆಟ್‌ ಆಗುತ್ತಿದ್ದಾರೆ ಎಂದರು.

100ರಲ್ಲಿ 80 ಕಾಂಗ್ರೆಸ್‌ ನಾಯಕರ ಮೇಲೆ ರೇಡ್‌ ಆಗುತ್ತದೆ. ಇನ್ನು ನೂರ ಕೇಸ್‌ನಲ್ಲಿ 98 ಕೇಸ್‌ಗಳಲ್ಲಿ ತಪ್ಪೇ ಇಲ್ಲ ಎಂದಾಗುತ್ತದೆ. 2 ಕೇಸ್‌ಗಳಲ್ಲಿ ಮಾತ್ರ ಶಿಕ್ಷೆಯಾಗುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಗ್ಗಟ್ಟಿದ್ದರೆ ವಕ್ಫ್ ಸಂಸ್ಥೆಗಳ ಅಭಿವೃದ್ಧಿ ಸಾಧ್ಯ!
ವ್ಯಕ್ತಿ ಜೀವಂತವಾಗಿದ್ದರೂ 5 ವರ್ಷಗಳಿಂದ ಸರ್ಕಾರಿ ದಾಖಲೆಗಳಲ್ಲಿ ಮೃತ!