ಕನ್ನಡಪ್ರಭ ವಾರ್ತೆ ಶಿವಮೊಗ್ಗಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಘೀ, ಚಿಕೂನ್ ಗುನ್ಯಾ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ, ಸೂಕ್ತ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮನವಿ ಮಾಡಿದ್ದಾರೆ.
ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು. ಇಂಥ ರೋಗ ಲಕ್ಷಣಗಳು ಕಂಡುಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು. ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯಬಹುದು. ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
- - - ಕೋಟ್
ಈ ಕಾಯಿಲೆ ಡೆಂಘೀಜ್ವರ ಹರಡುವ ಈಡೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುತ್ತದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಝಿಕಾ ರೋಗಲಕ್ಷಣಗಳಾದ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.
- - --4ಎಸ್‌ಎಂಜಿಕೆಪಿ01: ಡಾ. ಆರ್.ಸೆಲ್ವಮಣಿ
-ಫೋಟೋ: ಝಿಕಾ ವೈರಸ್.ಜೆಪಿಜಿ: