ಕೃಷಿಕ, ವಿದ್ವಾಂಸ ಸಾಂತೂರು ವಿಠಲ ಜೋಯಿಸರಿಗೆ ಜಿಲ್ಲಾ ಸಾಹಿತ್ಯ ಪರಿಷತ್‌ ಗೌರವ

KannadaprabhaNewsNetwork |  
Published : Nov 29, 2024, 01:02 AM IST
28ಜೋಯಿಸ್ | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕ ವತಿಯಿಂದ ಕನ್ನಡ ಮಾಸಾಚರಣೆ ‘ತಿಂಗಳ ಸಡಗರ -೨೦೨೪’ ಅಂಗವಾಗಿ ನಿವೃತ್ತ ಶಿಕ್ಷಕ, ಪ್ರಗತಿಪರ ಕೃಷಿಕ, ಹಿರಿಯ ವಿದ್ವಾಂಸ ವೇದಮೂರ್ತಿ ವಿಠಲ ಜೋಯಿಸರನ್ನು ಅವರ ಸಾಂತೂರು ನಿವಾಸದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾಪು

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕ ವತಿಯಿಂದ ಕನ್ನಡ ಮಾಸಾಚರಣೆ ‘ತಿಂಗಳ ಸಡಗರ -೨೦೨೪’ ಅಂಗವಾಗಿ ನಿವೃತ್ತ ಶಿಕ್ಷಕ, ಪ್ರಗತಿಪರ ಕೃಷಿಕ, ಹಿರಿಯ ವಿದ್ವಾಂಸ ವೇದಮೂರ್ತಿ ವಿಠಲ ಜೋಯಿಸರನ್ನು ಅವರ ಸಾಂತೂರು ನಿವಾಸದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ ಇಂತಹ ೧೪೪ ಕಡೆಗಳಲ್ಲಿ ಕಾರ್ಯಕ್ರಮಗಳು ನಡೆದಿದ್ದು, ಪ್ರತಿಯೊಬ್ಬರೂ ಕನ್ನಡ ನಾಡು, ನುಡಿ, ಸಾಹಿತ್ಯ ಪರೆಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಬಹು ದೊಡ್ಡ ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲ ಮಹಾನ್ ಸಾಧಕರ ಜೀವನದ ಸಂಕ್ಷಿಪ್ತ ಮಾಹಿತಿಯನ್ನು ದಾಖಲಿಸಿ ಪುಸ್ತಕ ರೂಪದಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್‌ ಮಾಡಲಿದೆ ಎಂದರು.ಗೌರವ ಸ್ವೀಕರಿಸಿದ ವಿಠಲ ಜೋಯಿಸರು ಮಾತನಾಡಿ, ತಮ್ಮ ಜೀವನದ ಹೆಜ್ಜೆ ಗುರುತುಗಳನ್ನು ಸ್ಮರಿಸಿ ನೆರೆದ ಶಿಷ್ಯವರ್ಗ ಹಾಗೂ ಸಾಹಿತ್ಯ ಪರಿಷತ್ತಿಗೆ ಕೃತಜ್ಞತೆಯನ್ನು ಸಲ್ಲಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ಅತಿಥಿಗಳಾಗಿ ತೋಕೂರಿನ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಮೂಲ್ಕಿ ರಾಮಕೃಷ್ಣ ಪೂಂಜಾ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಗಿರೀಶ್ ಪಲಿಮಾರು, ಕಸಾಪ ಸಭಾಭವನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ವಿದ್ವಾಂಸರಾದ ಪದ್ಮನಾಭ ಭಟ್, ರಘುಪತಿ ಭಟ್ ಮಾತನಾಡಿದರು.

ವೇದಿಕೆಯಲ್ಲಿ ಉದ್ಯಮಿ ರವೀಶ್ ಶೆಟ್ಟಿ ಪಿಲಾರು, ಸಾನದಮನೆ ಗುಣಕರ ಪೂಜಾರಿ, ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ರವೀಂದ್ರ ಪ್ರಭು, ಗ್ರಾ.ಪಂ. ಸದಸ್ಯರಾದ ಬಾಲಚಂದ್ರ ಶೆಟ್ಟಿ, ಶಿವರಾಮ ಭಂಡಾರಿ, ಯಶೋದಾ ಪೂಜಾರಿ, ಕಸಾಪ ಜಿಲ್ಲಾ ಕೋಶಾಧ್ಯಕ್ಷರಾದ ಮನೋಹರ ಪಿ., ಸದಸ್ಯರಾದ ನರಸಿಂಹಮೂರ್ತಿ, ಮುಡಾಡಿ ಮನೆ ಶುಭಕರ ಶೆಟ್ಟಿ, ಉದ್ಯಮಿ ಪ್ರಕಾಶ್ ಶೆಟ್ಟಿ ಸಾಂತೂರು, ಸುಬ್ರಹ್ಮಣ್ಯ ಭಟ್, ಪದ್ಮನಾಭ ಜೋಯಿಸ, ಪರಶುರಾಮ್ ಉಪಸ್ಥಿತರಿದ್ದರು.ಪಲಿಮಾರು ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಪಿಲಾರು ಸುಧಾಕರ ಶೆಣೈ ಪ್ರಾಸ್ತಾವನೆಗೈದರು. ಬಿ.ರಾಮಕೃಷ್ಣ ಭಟ್ ನಿರೂಪಿಸಿದರು. ಕಾಪು ಕಸಾಪ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು