ಅಂಗನವಾಡಿ ಕೇಂದ್ರಗಳಿಗೆ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಚಾಲನೆ

KannadaprabhaNewsNetwork | Published : May 28, 2024 1:00 AM

ಸಾರಾಂಶ

ಬೇಸಿಗೆ ರಜೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಅಂಗನವಾಡಿಗಳಿಗೆ ಸೋಮವಾರದಿಂದ ಅಧಿಕೃತ ಚಾಲನೆ ನೀಡಲಾಗಿದೆ. ತಾಲೂಕಿನ ಕೋಣನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಅವರು ಗುಲಾಬಿ ಹೂ ನೀಡುವ ಮೂಲಕ ಸ್ವಾಗತ ಕೋರಿದರು. ನಂತರ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಬೇಸಿಗೆ ರಜೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಅಂಗನವಾಡಿಗಳಿಗೆ ಸೋಮವಾರದಿಂದ ಅಧಿಕೃತ ಚಾಲನೆ ನೀಡಲಾಗಿದೆ. ತಾಲೂಕಿನ ಕೋಣನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಅವರು ಗುಲಾಬಿ ಹೂ ನೀಡುವ ಮೂಲಕ ಸ್ವಾಗತ ಕೋರಿದರು. ನಂತರ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭ ಹಾರೈಸಿದರು.

ನಂತರ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಸುಂದರವಾದ ವಾತಾವರಣವಿದೆ. ಮಕ್ಕಳು ವಿದ್ಯೆ ಕಲಿಯಲು ಪೂರಕವಾದ ಅನುಕೂಲವಿದೆ. ಪೌಷ್ಟಿಕ ಆಹಾರವನ್ನು ವಿತರಣೆ ಮಾಡಲಾಗುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗಳಿಗೆ ಕಳುಹಿಸಬೇಕು. ಅಂಗನವಾಡಿ ಮೇಲ್ವಿಚಾರಕರು ಮಕ್ಕಳ ಸುರಕ್ಷತೆ, ಆರೋಗ್ಯದ ಜೊತೆಗೆ ಶಿಕ್ಷಣವನ್ನು ಕಲಿಸಬೇಕು. ನಿತ್ಯವೂ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವಂತೆ ಸೂಚಿಸಿದರು.

ಬೇಸಿಗೆ ರಜಾ ನಂತರ ಮಕ್ಕಳು ಮತ್ತೆ ಮರಳಿ ಅಂಗನವಾಡಿ ಕೇಂದ್ರಗಳತ್ತ ಬಂದಿದ್ದಾರೆ. ಜಿಲ್ಲೆಯಲ್ಲಿರುವ ೫೮೮ ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಿದ್ದಗೊಳಿಸಲಾಗಿದೆ ಮಕ್ಕಳಿಗೆ ಕುದಿಸಿ ಆರಿಸಿದ ನೀರನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ ಅವರು ಮಂಡ್ಯ ತಾಲೂಕಿನ ಹೊಸ ಬೂದನೂರು, ಮಂಡ್ಯ ನಗರದ ಶಂಕರಮಠ, ಎಸ್.ಡಿ.ಜಯರಾಂ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಹೂ, ಸಿಹಿ ವಿತರಿಸಿ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು.

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮೂರ್ತಿ, ಮೇಲ್ವಿಚಾರಕರಾದ ಶಕುಂತಳಾ, ಕೋಮಲ್‌ಕುಮಾರ್ ಸೇರಿದಂತೆ ಇನ್ನಿತರರಿದ್ದರು.ಅಂಗನವಾಡಿ ಕೇಂದ್ರಗಳಲ್ಲಿ ಹಬ್ಬದ ವಾತಾವರಣ, ಮಕ್ಕಳಿಗೆ ಸ್ವಾಗತ

ಮದ್ದೂರು:ಬೇಸಿಗೆ ರಜಾ ನಂತರ ಸೋಮವಾರದಿಂದ ಆರಂಭವಾಗುತ್ತಿರುವ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಹಬ್ಬದ ವಾತಾವರಣ ನಿರ್ಮಿಸುವ ಮೂಲಕ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.

ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣ ಸೂಚನೆ ಮೇರೆಗೆ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣ ಹಾಗೂ ಪೀಠೊಪಕರಣಗಳ ಶುಚಿತ್ವ ಕಾಪಾಡುವುದರ ಜೊತೆಗೆ ಕೇಂದ್ರ ಆರಂಭದ ಬಗ್ಗೆ ಪೋಷಕರ ಸಭೆ ನಡೆಸಿದದ ಶಿಶು ಅಭಿವೃದ್ಧಿ ಅಧಿಕಾರಿ ನಾರಾಯಣ್ ಕೇಂದ್ರಗಳಲ್ಲಿ ಹಬ್ಬದ ವಾತಾವರಣ ನಿರ್ಮಿಸಿ ಮಕ್ಕಳನ್ನು ಸ್ವಾಗತಿಸಲು ಸಹಕಾರ ನೀಡುವಂತೆ ಮನವಿ ಮಾಡಿದರು.ಅದರಂತೆ ತಾಲೂಕಿನ 408 ಅಂಗನವಾಡಿ ಕೇಂದ್ರಗಳಲ್ಲಿ ಸೋಮವಾರ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

ಕೇಂದ್ರಗಳಿಗೆ ಭಾವಿಸಿದ ಮಕ್ಕಳಿಗೆ ಗುಲಾಬಿ ಹೂ ನೊಂದಿಗೆ ಸಿಹಿ ವಿತರಣೆ ಮಾಡಿ ಸ್ವಾಗತಿಸಲಾಯಿತು.ಈ ವೇಳೆ ಇಲಾಖೆ ಹಿರಿಯ ಮೇಲ್ವಿಚಾರಕಿ ಸುಜಾತ, ಮೇಲ್ವಿಚಾರಕರಾದ ರಾಜೇಶ್ವರಿ, ಜಯಲಕ್ಷ್ಮಿ ಗುರುಮಠ, ಭಾಗ್ಯ, ನೇತ್ರ, ಉಮಾ, ಸುನೀತಾ, ಅಸ್ಮಾ ಬಾನು ಸೇರಿದಂತೆ ಅಂಗನವಾಡಿ ಕೇಂದ್ರಗಳ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯ ಕೇಂದ್ರಗಳಲ್ಲಿ ಹಬ್ಬದ ವಾತಾವರಣ ನಿರ್ಮಿಸಿ ಮಕ್ಕಳನ್ನು ಬರಮಾಡಿಕೊಂಡರು.

Share this article