ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬೀಳಗಿ ತಾಲೂಕಿನ ಸುನಗ ಮತ್ತು ಸುನಗ ತಾಂಡಾ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದ ಅವರು ಮನೆ ಮನೆಗೆ ಅಳವಡಿಸಲಾಗಿರುವ ನಲ್ಲಿಗಳ ಸಂಪರ್ಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು. ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡು ದಿನ 24 ಗಂಟೆಗಳ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಗ್ಗೂರ ಆರ್.ಸಿ ಮತ್ತು ಗೋವಿನದಿನ್ನಿ ಆರ್.ಸಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದಲ್ಲಿ ಜಲಮೂಲಗಳು ಉತ್ತಮವಾಗಿದ್ದು, ಜನರ ಆರೋಗ್ಯದ ಮೇಲೆ ನೀರು ನಿರ್ವಹಣೆ ಮುಖ್ಯ ಪಾತ್ರ ವಹಿಸುತ್ತಿರುವ ಕಾರಣ ನೀರಿನ ಸಂಪರ್ಕಗಳನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು. ನಾಗರಾಳ ತಾಂಡಾ ಮತ್ತು ತೆಗ್ಗಿ ಗ್ರಾಮಕ್ಕೆ ಭೇಟಿ ನೀಡಿ, ಯೋಜನೆಯಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸುವ ಮೂಲಕ ಗ್ರಾಮದಲ್ಲಿ ದುರಸ್ತಿಗಳನ್ನು ಕೈಗೊಳ್ಳಲು ಸೂಚಿಸಿದರು.ಅಮಲಝರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿರುವ ಉತ್ತಮ ನೀರಿನ ವ್ಯವಸ್ಥೆ ಮತ್ತು ಸಾರ್ವಜನಿಕರ ಸಹಭಾಗಿತ್ವದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ನಿರಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುಲು ತಿಳಿಸಿದರು. ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಂಡಿರುವ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವ ಮೂಲಕ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ಜಾರಿಗೆ ತರುವಂತೆ ಸೂಚಿಸಿದರು.
ಭೇಟಿ ಸಮಯದಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಆಕಾಶ್, ಪ್ರಬಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಕೆ.ಡಂಬಳ ಸೇರಿದಂತೆ ಶಾಖಾಧಿಕಾರಿಗಳು, ಪಂಚಾಯತಿ ಅಭಿವೃಧ್ದಿ ಅಧಿಕಾರಿಗಳು, ಗ್ರಾಮದ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.