ವಿವಿಧ ಕಾಮಗಾರಿಗಳಿಗೆ ಜಿಪಂ ಸಿಇಒ ಭೇಟಿ, ಪರಿಶೀಲನೆ

KannadaprabhaNewsNetwork |  
Published : Jun 06, 2025, 11:50 PM IST
ಶಿರಹಟ್ಟಿ ತಾಲೂಕಿನಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳಿಗೆ ಜಿಪಂ ಸಿಇಒ ಭರತ್.ಎಸ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಶಿರಹಟ್ಟಿ ತಾಲೂಕಿನಲ್ಲಿ ನಬಾರ್ಡ್‌ ಯೋಜನೆಯಡಿ ಪ್ರಗತಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಜಿಪಂ ಸಿಇಒ ಭರತ್‌ ಎಸ್‌. ಅವರು ಭೇಟಿ ನೀಡಿ, ಪರಿಶೀಲಿಸಿದರು.

ಶಿರಹಟ್ಟಿ: ತಾಲೂಕಿನಲ್ಲಿ ನಬಾರ್ಡ್‌ ಯೋಜನೆಯಡಿ ಪ್ರಗತಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಜಿಪಂ ಸಿಇಒ ಭರತ್‌ ಎಸ್‌. ಅವರು ಭೇಟಿ ನೀಡಿ, ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಶಿರಹಟ್ಟಿ ವ್ಯಾಪ್ತಿಯ ಸಿ.ಸಿ.ಎನ್ ಸರಕಾರಿ ಪ್ರಾಢಶಾಲೆಗೆ ದಿಢೀರ್ ಭೇಟಿ ನೀಡಿ ಮಕ್ಕಳ ದಾಖಲಾತಿ, ಬೋಧನಾ ಗುಣಮಟ್ಟ, ಶಾಲಾ ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ, ಅಡುಗೆ ಕೋಣೆಗಳಿಗೆ ಭೇಟಿ ನೀಡಿ ಸ್ವಚ್ಛತೆಯನ್ನು ಅವಲೋಕಿಸಿದರು. ನಂತರ ತಾಲೂಕಿನ ಬೆಳ್ಳಟ್ಟಿ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಬಾಣಂತಿಯರ ದಾಖಲಾತಿ, ಹೊರ ರೋಗಿಯ ವಿಭಾಗ, ಲೇಬರ್ ವಿಭಾಗ, ಔಷಧಿ ವಿಭಾಗ ಪರಿಶೀಲನೆ ನೆಡೆಸಿದರು ಹಾಗೂ ಗ್ರಾಮದ ಸರಕಾರಿ ಪ್ರಾಢಶಾಲೆಗೆ ಭೇಟಿ ನೀಡಿ ಹಾಜರಾತಿ, ಬಿಸಿ ಊಟದ ಕೊಠಡಿ, ಬೋಧನಾ ಗುಣಮಟ್ಟ, ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿದರು.

ಅಡುಗೆ ಸಿಬ್ಬಂದಿಗಳೊಂದಿಗೆ ಮಾತನಾಡಿದ ಅವರು, ಬಿಸಿಯೂಟಕ್ಕೆ ಬಳಸುವ ತರಕಾರಿ, ಮಕ್ಕಳಿಗೆ ವಿತರಿಸುವ ಮೊಟ್ಟೆ, ಬಾಳೆಹಣ್ಣಿನ ಬಗ್ಗೆ ಮಾಹಿತಿ ಪಡೆದರು. ಶಾಲಾ ಮಕ್ಕಳಿಗೆ ವಿತರಿಸಲಾಗುವ ಊಟದ ಕುರಿತು ಅಕ್ಷರ ದಾಸೋಹದ ಕೊಠಡಿಗಳಿಗೆ ಭೇಟಿ ನೀಡಿ ದವಸ ಧಾನ್ಯ, ತರಕಾರಿಗಳನ್ನು ಪರೀಕ್ಷಿಸಿದರು.ತದನಂತರ ತಾಲೂಕಿನ ಇಟಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಸಾಸರವಾಡ ಗ್ರಾಮದ ನಡುಗಡ್ಡೆಯಲ್ಲಿ ಸಮುದಾಯ ಪ್ರವಾಸೋದ್ಯಮದ ಸ್ಥಳ ಪರಿಶೀಲನೆ ನಡೆಸಿದರು.

ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿ, ಶಾಲಾ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?