ಜಿಪಂ ಸಿಇಓ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

KannadaprabhaNewsNetwork |  
Published : Jun 14, 2025, 12:52 AM IST
ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಪಂ ಸಿಇಓ ಭರತ್‌.ಎಸ್‌  ಭೇಟಿ ನೀಡಿ, ಪರಿಶೀಲಿಸಿದರು. | Kannada Prabha

ಸಾರಾಂಶ

ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಪಂ ಸಿಇಓ ಭರತ್ ಎಸ್. ಅವರು ಭೇಟಿ ನೀಡಿದರು.

ಗದಗ:ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಪಂ ಸಿಇಓ ಭರತ್ ಎಸ್. ಅವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮದ ಜಮೀನು, ಮನೆ, ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿನ ಜನರ ಸ್ಥಿತಿಗತಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಂದರ್ಭಕ್ಕನುಸಾರ ಪ್ರವಾಹ ಪರಿಸ್ಥಿತಿಯನ್ನು ಅಧಿಕಾರಿ ಹಾಗೂ ಸಿಬ್ಬಂದಿಗಳ ಸ್ಥಳದಲ್ಲಿದ್ದು, ಸಮರ್ಥವಾಗಿ ನಿರ್ವಹಣೆ ಮಾಡಬೇಕು. ಸಮಸ್ಯೆ ತಲೆದೋರಿದಲ್ಲಿ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದರು.ಪ್ರವಾಹ ಹಾಗೂ ಅತೀವೃಷ್ಟಿಯಿಂದ ಜನ ಜಾನುವಾರುಗಳ ಜೀವ ರಕ್ಷಣೆಗೆ ಪ್ರಥಮಾದ್ಯತೆ ನೀಡಬೇಕು. ನಂತರದಲ್ಲಿ ಸಾರ್ವಜನಿಕರ ಆಸ್ತಿ ರಕ್ಷಣೆಗೆ ಅಧಿಕಾರಿ ವರ್ಗ ಮುಂದಾಗಬೇಕು. ತಗ್ಗು ಪ್ರದೇಶಗಳಲ್ಲಿನ ಜನಸಾಮಾನ್ಯರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳಲು ಸ್ಥಳೀಯ ಅಧಿಕಾರಿಗಳು ಸೂಚಿಸಬೇಕು. ಒಟ್ಟಾರೆ ಇಲಾಖಾಧಿಕಾರಿಗಳ ಸಮನ್ವಯದೊಂದಿಗೆ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆಯಬೇಕು ಎಂದರು.ಈ ಸಂದರ್ಭದಲ್ಲಿ ಜಿಪಂ ಸಿಇಓ ಅವರು, ಅಬ್ಬಿಗೇರಿಯ ಅಟಲ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು