ಬಿಜೆಪಿ ಪಾದಯಾತ್ರೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Aug 07, 2024, 01:00 AM IST
6ಕೆಬಿಪಿಟಿ.1.ಬಂಗಾರಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ಮಾಡಿದರು. | Kannada Prabha

ಸಾರಾಂಶ

ಬಿಜೆಪಿ ನಾಯಕರೇನು ನಿಷ್ಠಾವಂತರೇನಲ್ಲ. ಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾಕೆ, ಅಧಿಕಾರ ಸಿಕ್ಕಾಗ ಜನಪರ ಆಡಳಿತ ನೀಡದೆ ರಾಜ್ಯವನ್ನು ಲೂಟಿ ಮಾಡಿದರು. ಪ್ರಧಾನಿ ಸಹ ಭ್ರಷ್ಟಾಚಾರದಿಂದ ಮುಕ್ತರಲ್ಲ ಆದರೆ ಅದರ ಬಗ್ಗೆ ಮಾಧ್ಯಮಗಳು ಪ್ರಚಾರ ಮಾಡುತ್ತಿಲ್ಲ.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡಿ ದೊಡ್ಡ ಚೊಂಬು ನೀಡಿ, ಜನಪರವಾಗಿರುವ ಕಾಂಗ್ರೆಸ್ ಸರ್ಕಾರವನ್ನು ಪತನತೊಳಿಸಲು ಬಿಜೆಪಿ, ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆಂದು ಆರೋಪಿ ಪಟ್ಟಣದಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ ನಡೆಸಿತು.ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದರೂ ಅದನ್ನು ಪ್ರಶ್ನೆ ಮಾಡದ ಬಿಜೆಪಿ ನಾಯಕರು, ಆಧಾರವಿಲ್ಲದ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಮೈತ್ರಿ ಪಕ್ಷಗಳು ನಕಲಿ ಪಾದಯಾತ್ರೆ ನಡೆಸುತ್ತಿವೆ. ಬಿಜೆಪಿ ಅವಧಿಯಲ್ಲಿ ನಡೆದಿರುವ ೨೧ ಹಗರಣಗಳನ್ನು ಸರ್ಕಾರ ತನಿಖೆ ಮಾಡಬೇಕೆಂದು ಒತ್ತಾಯಿಸಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನೇತೃತ್ವದಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನಾ ರ‍್ಯಾಲಿ ನಡೆಸಿದರು..ಬಿಜೆಪಿ ಸರ್ಕಾರದಲ್ಲಿ ಅವ್ಯವಹಾರ

ಕಾಂಗ್ರೆಸ್ ಕಚೇರಿಂದ ಹೊರಟ ಪ್ರತಿಭಟನಾ ರ‍್ಯಾಲಿ ಕುವೆಂಪು ವೃತ್ತ ತಲುಪಿತು. ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ನಾರಾಯಣಸ್ವಾಮಿ, ಬಿಜೆಪಿ ನಾಯಕರಿಗೆ ಕುತಂತ್ರ ರಾಜಕೀಯ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಕೋಟ್ಯಂತರ ರು.ಗಳ ಅವ್ಯವಹಾರ ನಡೆಸಿದ್ದಾರೆಂದು ವಿವರಿಸಿದರು.

ಬಿಜೆಪಿ ನಾಯಕರೇನು ನಿಷ್ಠಾವಂತರೇ ಎಂದು ಪ್ರಶ್ನಿಸಿದ ಶಾಸಕರು, ಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾಕೆ, ಅಧಿಕಾರ ಸಿಕ್ಕಾಗ ಜನಪರ ಆಡಳಿತ ನೀಡದೆ ರಾಜ್ಯವನ್ನು ಲೂಟಿ ಮಾಡಿದರು. ಪ್ರಧಾನಿ ಸಹ ಭ್ರಷ್ಟಾಚಾರದಿಂದ ಮುಕ್ತರಲ್ಲ ಆದರೆ ಅದರ ಬಗ್ಗೆ ಮಾಧ್ಯಮಗಳು ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದರು.ಸರ್ಕಾರದ ಪತನಕ್ಕೆ ಬಿಜೆಪಿ ಯತ್ನ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಅಸ್ಥಿರಗೊಳಿಸಲು ವಾಲ್ಮೀಕಿ ಹರಗಣದ ವಿರುದ್ದ ಹೋರಾಡಿದರು. ಇದರಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗದಿದ್ದರೂ ವಿನಾಕಾರಣ ಆರೋಪ ಮಾಡಿದರು, ಆದರೆ ಸರ್ಕಾರ ತಪ್ಪು ಮಾಡಿದವರನ್ನು ಶಿಕ್ಷಿಸಿ ಅವರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಬದ್ದತೆ ತೋರಿಸುತ್ತದೆ. ಮುಡಾ ಹರಗಣಕ್ಕೂ ಸಿದ್ದರಾಮಯ್ಯಗೂ ಯಾವುದೇ ಸಂಬಂಧವಿಲ್ಲ. ದೇವರಾಜ ಅರಸು ನಂತರ ಉತ್ತಮ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ,ಜೆಡಿಎಸ್ ನಾಯಕರು ಕುತಂತ್ರ ರಾಜಕೀಯದಲ್ಲಿ ತೊಡಗಿದ್ದಾರೆ ಅದು ಫಲಿಸದು ಎಂದರು.ಎಚ್ಡಿಕೆ ಆಸ್ತಿ ಸಕ್ರಮವೇ?

ಡಿ.ಕೆ.ಶಿವಕುಮಾರ್ ಆಸ್ತಿ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರು,ಬಿಡದಿ ಇತರೇ ಕಡೆ ಇರುವ ಆಸ್ತಿ ಏನು ಸಕ್ರಮನಾ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪರ ನಾವಿದ್ದೇವೆ. ಸರ್ಕಾರವನ್ನು ಯಾವುದೇ ಕಾರಣಕ್ಕೂ ಬೀಳಿಸಲು ಬಿಡುವುದಿಲ್ಲ. ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಭವಿಷ್ಯ ನುಡಿದರು.

ಪ್ರಜಾಪ್ರಭುತ್ವದ ಸರ್ಕಾರವನ್ನು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಕೆಡವಲು ಯತ್ನಿಸಿದರೆ ರಾಜ್ಯದ ಜನ ನಿಮ್ಮನ್ನು ಸುಮ್ಮನೆ ಬಿಡಲ್ಲ ಬೀದಿಗಿಳಿದು ಹೋರಾಟ ಮಾಡಲಾಗುವುದು ಪ್ರತಿಯಾಗಿ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವನ್ನು ಹುರುಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಾಲಗೌಡ,ಕೆ.ವಿ.ನಾಗರಾಜ್,ಚಂದ್ರಕುಮಾರ್,ಡಿಸಿಸಿ ಬ್ಯಾಂಕಿನ ನಿರ್ದೇಶಕ ಗೋವಿಂದರಾಜು, ಕೆಡಿಎ ಅಧ್ಯಕ್ಷ ಗೋಪಾಲರೆಡ್ಡಿ, ಮುಖಂಡರಾದ ಶಂಷುದ್ದಿನ್ ಬಾಬು, ಪಾರ್ಥಸಾರಥಿ, ಎ.ಬಾಬು, ಮುನಿರಾಜು, ಎಸ್.ಕೆ.ಜಯಣ್ಣ,ನಾರಾಯಣಸ್ವಾಮಿ,ಆನಂದ್ ಇದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಪ್ರಿಯಾಂಕಾ ಗಾಂಧಿಕೈ ಪ್ರಧಾನಿ ಅಭ್ಯರ್ಥಿ ಆಗಲು ಭಾರಿ ಒತ್ತಡ!
''ದ್ವೇಷ ಭಾಷಣ ಕಾಯ್ದೆ : ಜಾತಿ ನಿಂದನೆಯ ರೀತಿ ದುರ್ಬಳಕೆ ಆಗಬಹುದು''