ಕಾಂಗ್ರೆಸ್ ‘ಗ್ಯಾರಂಟಿ’ಗಳೇ ಗೌತಮ್ ಗೆಲುವಿಗೆ ಶ್ರೀರಕ್ಷೆ: ಕೊತ್ತೂರು ಜಿ.ಮಂಜುನಾಥ್

KannadaprabhaNewsNetwork |  
Published : Apr 06, 2024, 12:46 AM ISTUpdated : Apr 06, 2024, 04:47 AM IST
೬ಕೆಎಲ್‌ಆರ್-೭ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಸಭೆಯಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿದರು. | Kannada Prabha

ಸಾರಾಂಶ

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿರುವುದರಿಂದ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಬಡವರ ಪಕ್ಷ ಎಂಬುದು ಮನದಟ್ಟಾಗಿದೆ ಎಂಬುದು ಕಾಂಗ್ರೆಸ್‌ ನಾಯಕರ ಅಭಿಪ್ರಾಯ

 ಕೋಲಾರ : ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನದ ಬಗ್ಗೆ ಮತದಾರರಿಗೆ ಮನವರಿಕೆ ಮಾಡುವ ಮೂಲಕ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿರುವುದರಿಂದ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಬಡವರ ಪಕ್ಷ ಎಂಬುದು ಮನದಟ್ಟಾಗಿದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಸರಕಾರದ ಗ್ಯಾರಂಟಿ ಯೋಜನೆಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆ ಎಂದು ತಿಳಿಸಿದರು.

ಅಭ್ಯರ್ಥಿ ಗೌತಮ್‌ ಆಯ್ಕೆ ಮಾಡಿ

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಾ ಇದ್ದು ಜನರ ವಿಶ್ವಾಸವನ್ನು ಪಡೆದಿದೆ ಅದೇ ರೀತಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲು, ರಾಹುಲ್ ಗಾಂಧಿಯವರ ಕೈ ಬಲಪಡಿಸಬೇಕು. ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಲು ಗೌತಮ್ ಅವರನ್ನು ಆಯ್ಕೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಮುಂದಿನ ರಾಜಕೀಯ ಅಸ್ತಿತ್ವಕ್ಕಾಗಿ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜನ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಲೋಕಸಭಾ ಚುನಾವಣೆಯಲ್ಲಿ ಗೌತಮ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.

ಬಿಜೇಪಿಗೆ ತಕ್ಕ ಪಾಠ

ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ದೇಶದ ಜನರು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಈ ಚುನಾವಣೆಯಲ್ಲಿ ಕಲಿಸಲಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಬರುವುದು ಖಚಿತ. ರಾಜ್ಯದಲ್ಲಿ ಕೂಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಪಡೆಯಲಿದೆ ಎಂದರು.

ಸೇವೆಗೆ ಅ‍ಕಾಶ ನೀಡಿ

ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ, ಕಾಂಗ್ರೆಸ್ ಪಕ್ಷವು ನನ್ನಂತಹ ಸಾಮಾನ್ಯ ವ್ಯಕ್ತಿಗೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಡಿದೆ ಎಲ್ಲರ ನಂಬಿಕೆ ಉಳಿಸುವ ಕೆಲಸವನ್ನು ಮಾಡುತ್ತೇನೆ ನನಗೆ ನಿಮ್ಮಗಳ ಸೇವೆ ಮಾಡಲು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ನಗರಸಭೆ ಸದಸ್ಯರಾದ ಮುರಳಿಗೌಡ, ಆಫ್ಸರ್, ಮಂಜುನಾಥ್, ಕುರಿಗಳ ರಮೇಶ್, ಸೂರಿ, ಶಫಿ, ಇದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ