‘ಜಿಲ್ಲೆಯ ಮಹಿಳೆಯರ ಸಬಲೀಕರಣಕ್ಕೆ ಪ್ರಾಮಾಣಿಕ ಯತ್ನ’

KannadaprabhaNewsNetwork |  
Published : Oct 09, 2023, 12:45 AM ISTUpdated : Oct 09, 2023, 03:41 PM IST
ಸಿಕೆಬಿ-1 ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಮಮತಾಮೂರ್ತಿ ಮಾತನಾಡಿದರು.     | Kannada Prabha

ಸಾರಾಂಶ

‘ಜಿಲ್ಲೆಯ ಮಹಿಳೆಯರ ಸಬಲೀಕರಣಕ್ಕೆ ಪ್ರಾಮಾಣಿಕ ಯತ್ನ’

ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆ ಸಬಲರಾಗಬೇಕು: ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಮಮತಾಮೂರ್ತಿ ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ ,ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸಬಲರನ್ನಾಗಿಸುವ ದಿಸೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಮಮತಾಮೂರ್ತಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಕಟ್ಟುವಲ್ಲಿ ಇಂದಿರಾಗಾಂಧಿ, ಸೋನಿಯಾಗಾಂಧಿ ಮತ್ತು ಪ್ರಿಯಾಂಕವಾದ್ರ ರಂತಹ ಅದಿನಾಯಕಿಯರು ಅಗ್ರಗಣ್ಯರಾಗಿದ್ದು, ಅಂತಹ ಮಹಿಳಾ ಶಕ್ತಿಯ ಸಂಘಟನೆಯನ್ನು ಮಾಡುವ ಕೆಲಸ ನನಗೆ ನೀಡಿದ್ದಾರೆ ಎಂದರು. ಮಹಿಳೆಯರಿಗೆ ವಿಶೇಷ ತರಬೇತಿ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಲು ಜಿಲ್ಲೆಯಾದ್ಯಂತ ಬೂತ್ ಮಟ್ಟದಿಂದ ಮಹಿಳೆಯರನ್ನು ಸಂಘಟಿಸುವ ಗುರುತರ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಅದರಂತೆ ಈಗಾಗಲೇ ಜಿಲ್ಲೆಯ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೆಪಲ್ಲಿ, ಗುಡಿಬಂಡೆ, ಗೌರಿಬಿದನೂರು, ಶಿಡ್ಲಘಟ್ಟ ಮತ್ತು ಚಿಂತಾಮಣಿ ಹಾಗೂ ನೂತನ ತಾಲೂಕು ಕೇಂದ್ರಗಳಾದ ಮಂಚೇನಹಳ್ಳಿ, ಚೇಳೂರು ಈ ಭಾಗದಲ್ಲಿಯೂ ಮಹಿಳೆಯರಿಗೆ ವಿಶೇಷ ತರಬೇತಿ ನೀಡಿ, ಪಕ್ಷ ಸಂಘಟಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು. ಶೀಘ್ರದಲ್ಲೇ ನಿರುದ್ಯೋಗಿ ಭತ್ಯೆ ಈಗಾಗಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವ ನೀಡಿದ್ದ ಐದು ಗ್ಯಾರಂಟಿಗಳ ಭರವಸೆಯಲ್ಲಿ ನಾಲ್ಕನ್ನು ಈಡೇರಿಸಿದ್ದು, ಐದನೆ ಭಾಗ್ಯವಾದ ನಿರುದ್ಯೋಗಿ ಯುವಕ-ಯುವತಿಯರಿಗೆ ಶೀಘ್ರದಲ್ಲೆ ನಿರುದ್ಯೋಗಿ ಭತ್ಯೆಯನ್ನು ನೀಡಿ, ಈಡೇರಿಸಲಿದೆ ಎಂದು ಹೇಳಿದರು. ರಾಜ್ಯದ ವಿವಿಧ ಭಾಗಗಳಲ್ಲಿ ನೂತನವಾಗಿ ಮದ್ಯದ ಅಂಗಡಿಗಳನ್ನು ರಾಜ್ಯ ಸರ್ಕಾರ ತೆರೆಯುವ ಬಗ್ಗೆ ಸಿದ್ದರಾಮಯ್ಯ ಅವರು ಮುಂದಾಗಿದ್ದರೆ. ಇದು ಮಹಿಳೆಯರಿಗೆ ವಿರುದ್ಧ ಅಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮಮತಾ ಮೂರ್ತಿ, ತಾವು ಮಹಿಳೆಯಾಗಿ ವೈಯಕ್ತಿಕವಾಗಿ ಮದ್ಯದ ಅಂಗಡಿಗಳನ್ನು ತೆರೆಯುವುದಕ್ಕೆ ವಿರೋಧವಿದೆ ಎಂದರು. ಮಹಿಳೆಯ ವಿರುದ್ಧ ಕೆಲಸ ಮಾಡೋಲ್ಲ ಮಹಿಳೆಯರಿಗೆ ವಿರುದ್ಧವಾಗಿ ಯಾವುದೇ ತರನಾದ ಕೆಲಸ ಮಾಡುವುದಿಲ್ಲ, ಪಕ್ಷದಲ್ಲಿ ಪಕ್ಷದ ನಾಯಕರು ಹೇಳಿದಂತೆ ಕೆಲಸ ಮಾಡುತ್ತೇನೆ, ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಿಗೆ ನಾವು ಅದಕ್ಕೆ ಉತ್ತರ ಕೊಡುವುದಿಲ್ಲ. ಪಕ್ಷದ ಹಿರಿಯ ನಾಯಕರು ಇದಕ್ಕೆ ಸಂಬಂಧಪಟ್ಟಂತ ಉತ್ತರ ನೀಡುತ್ತಾರೆ. ತ್ತಾರೆ ನಾನು ಪ್ರತಿಕ್ರಿಯಿಸುವುದು ತರವಲ್ಲ ಎಂದರು. ಇದೇ ವೇಳೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕಗೊಂಡಿದ್ದಕ್ಕೆ ಮಮತಾಮೂರ್ತಿಯವರಿಗೆ ಮಹಿಳಾ ಕಾಂಗ್ರೆಸ್ ನ ವತಿಯಿಂದ ಸನ್ಮಾನಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಸದಸ್ಯರಾದ ಸರೋಜಾದೇವಿ, ವೆಂಕಟಲಕ್ಷ್ಮಮ್ಮ, ಹಸೀನಾ ಬಾನು, ರೂಪ, ಬಿ.ಚಾಯದೇವಿ, ಅರುಣ, ಶಾರದಮ್ಮ, ಪದ್ಮ, ದ್ರಾಕ್ಷಾಯಿಣಿ, ಟಿ. ವರಲಕ್ಷ್ಮಿ, ಟಿ.ಮಂಜುಳಾ, ಅರುಣ ಕುಮಾರಿ, ಸುನಂದಮ್ಮ, ಶಾರದಾ ಸೇರಿದಂತೆ ಮತ್ತಿತರ ಪ್ರಮುಖರು ಹಾಜರಿದ್ದರು. ಸಿಕೆಬಿ-1 ಚಿಕ್ಕಬಳ್ಳಾಪುರ ನಗರದಲ್ಲಿ ಮಹಿಳಾ ಕಾಂಗ್ರೆಸ್ ನ ಜಿಲ್ಲಾ ಉಸ್ತುವಾರಿ ಮಮತಾಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ಆಗಲ್ಲ: ಡಿಕೆ ಬ್ರದರ್ಸ್‌ ನಿಗೂಢ ಪೋಸ್ಟರ್‌ ಸಂಚಲನ
ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ