1.24 ಕೋಟಿ ಗೃಹ ಲಕ್ಷ್ಮಿಯರಿಗೆ ₹ 1.54 ಕೋಟಿ : ಲಕ್ಷ್ಮೀ ಹೆಬಾಳ್ಕರ್

Published : Dec 10, 2025, 11:50 AM IST
Lakshmi Hebbalkar

ಸಾರಾಂಶ

‘ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ರಾಜ್ಯದ 1.24 ಕೋಟಿ ಮಹಿಳೆಯರಿಗೆ ತಲಾ 2000 ರು.ನಂತೆ 23 ಕಂತುಗಳಲ್ಲಿ 54,000 ಕೋಟಿ ರು. ಪಾವತಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದರು.

ಸುವರ್ಣ ವಿಧಾನಸಭೆ: ‘ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ರಾಜ್ಯದ 1.24 ಕೋಟಿ ಮಹಿಳೆಯರಿಗೆ ತಲಾ 2000 ರು.ನಂತೆ 23 ಕಂತುಗಳಲ್ಲಿ 54,000 ಕೋಟಿ ರು. ಪಾವತಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದರು. 

ಬಿಜೆಪಿ ಸದಸ್ಯ ಮಹೇಶ್‌ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವೆ,‘ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆಯನ್ನು ಮಾದರಿಯಾಗಿ ಸ್ವೀಕರಿಸಿ ಇತರೆ ರಾಜ್ಯಗಳು ಜಾರಿಗೊಳಿಸಿವೆ. ಯೋಜನೆ ಆರಂಭದಿಂದ ಕಳೆದ ಆಗಸ್ಟ್‌ವರೆಗೆ 1.24 ಕೋಟಿ ರು. ಮಹಿಳಾ ಫಲಾನುಭವಿಗಳಿಗೆ ತಲಾ 2 ಸಾವಿರ ರು.ನಂತೆ 54 ಸಾವಿರ ಕೋಟಿ ರು. ಪಾವತಿಸಲಾಗಿದೆ ಎಂದರು.

23 ಕಂತುಗಳನ್ನು ಪಾವತಿಸಲಾಗಿದೆ

ಇದಕ್ಕೂ ಮುನ್ನ ಮಹೇಶ್‌ ಟೆಂಗಿನಕಾಯಿ ಮಾತನಾಡಿ, ಪ್ರಸಕ್ತ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಫಲಾನುಭವಿಗಳಿಗೆ ಹಣ ಬಂದಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ತಾವು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದು. ಇದಕ್ಕೆ ಉತ್ತರಿಸಿದ ಸಚಿವೆ, ಈವರೆಗೆ 23 ಕಂತುಗಳನ್ನು ಪಾವತಿಸಲಾಗಿದೆ. ಸೆಪ್ಟೆಂಬರ್‌, ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಕಂತು ಬಾಕಿಯಿದೆ. ಆರ್ಥಿಕ ಇಲಾಖೆ ಕಡತ ವಿಲೇವಾರಿ ಮಾಡುತ್ತಿದ್ದಂತೆ ಕೂಡಲೇ ಬಾಕಿ ಕಂತುಗಳನ್ನು ಪಾವತಿಸಲಾಗುವುದು ಎಂದು ತಿಳಿಸಿದರು.

ತಿಂಗಳ ಕಾಲ ಕೊಂಚ ಗೊಂದಲ

‘ಯೋಜನೆ ಆರಂಭದಲ್ಲಿ 3 ತಿಂಗಳ ಕಾಲ ಕೊಂಚ ಗೊಂದಲಗಳಿದ್ದ ಕಾರಣ ವಿಳಂಬವಾಯಿತು. ಇದೀಗ ಎಲ್ಲವೂ ಬಗೆಹರಿದಿದ್ದು, ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ. ಈ ಯೋಜನೆ ಅನುಷ್ಠಾನಕ್ಕೆ ನಮಗೆ ಬದ್ಧತೆ ಇದೆ. ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಸ್ವಾರ್ಥ ಇಲ್ಲ’ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ ; ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು : ಬಿಜೆಪಿ ಆರೋಪ