-ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸೇರಿ ಹಲವು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ
-ನಾಮಪತ್ರ ಸಲ್ಲಿಸಲು ನ.10ರವರೆಗೆ ಅವಕಾಶಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಶನಿವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ 100 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಕೋಡಂಗಲ್ ಕ್ಷೇತ್ರದಿಂದಲೂ, ತುಮ್ಮಲ ನಾಗೇಶ್ವರ ರಾವ್ ಖಮ್ಮಂ ಕ್ಷೇತ್ರದಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ನ.10ರ ಮಧ್ಯಾಹ್ನ 3 ರವರೆಗೆ ಅವಕಾಶವಿದ್ದು, ನ.15 ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿರುತ್ತದೆ. ನಾಮಪತ್ರ ಸಲ್ಲಿಸುವಾಗ ಚುನಾವಣಾಧಿಕಾರಿ ಕಚೇರಿಯ ಪ್ರಾಂಗಣಕ್ಕೆ ಕೇವಲ 3 ವಾಹನಗಳು ಹಾಗೂ 5 ಮಂದಿಗೆ ಮಾತ್ರ ಅವಕಾಶವಿದ್ದು, ಉಮೇದುವಾರಿಕೆ ಸಲ್ಲಿಸುವ ಅಭ್ಯರ್ಥಿಗಳು ಫಾರ್ಮ್-26ರಲ್ಲಿ ಎಲ್ಲ ಅಗತ್ಯ ವಿವರಗಳನ್ನು ಸಲ್ಲಿಸಬೇಕಿರುತ್ತದೆ.