ಸಿದ್ದರಾಮಯ್ಯ ಪುತ್ರ ಸೇರಿ 11 ಮಂದಿ ಮೇಲ್ಮನೆಗೆ ಅವಿರೋಧ ಆಯ್ಕೆ

ಸಾರಾಂಶ

ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಗುರುವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, 11 ಅಭ್ಯರ್ಥಿಗಳ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು.

ಬೆಂಗಳೂರು ;  ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಗುರುವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, 11 ಅಭ್ಯರ್ಥಿಗಳ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು.

ಕಾಂಗ್ರೆಸ್‌‍ ಅಭ್ಯರ್ಥಿಗಳಾದ ಸಚಿವ ಎನ್‌.ಎಸ್‌‍.ಬೋಸರಾಜು, ಐವಾನ್‌ ಡಿಸೋಜಾ, ಕೆ.ಗೋವಿಂದರಾಜ್‌, ಜಗದೇವ ಗುತ್ತೇದಾರ್‌, ಬಲ್ಕೀಸ್‌‍ ಬಾನು, ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಎ.ವಸಂತಕುಮಾರ್‌, ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಮೂಳೆ ಮಾರುತಿರಾವ್‌ ಹಾಗೂ ರವಿಕುಮಾರ್‌, ಜೆಡಿಎಸ್‌‍ನ ಅಭ್ಯರ್ಥಿ ಟಿ.ಎನ್‌.ಜವರಾಯಿಗೌಡ ಅವರ ನಾಮಪತ್ರಗಳು ಮಾನ್ಯವಾಗಿವೆ.

ಪಕ್ಷೇತರ ಅಭ್ಯರ್ಥಿ ಆಸಿಫ್‌ ಪಾಷಾ ಅವರಿಗೆ ಸೂಚಕರು ಇಲ್ಲದ ಕಾರಣ ಅವರ ನಾಮಪತ್ರ ತಿರಸ್ಕೃತವಾಗಿದೆ. 11 ಸ್ಥಾನಗಳಿಗೆ 11 ಅಭ್ಯರ್ಥಿಗಳು ಮಾತ್ರ ಕಣದಲ್ಲಿರುವ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಖಚಿತವಾಗಿದೆ. ನಾಮಪತ್ರ ವಾಪಸ್‌‍ ಪಡೆಯಲು ಗುರುವಾರ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯ ಬಳಿಕ ಅವಿರೋಧವಾಗಿ ಆಯ್ಕೆ ಬಗ್ಗೆ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಲಿದ್ದಾರೆ.

Share this article