ಶೀಘ್ರವೇ 15 ಜನ ಕಾಂಗ್ರೆಸ್ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಬೆಳಗಾವಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಬಣ ಬಡಿದಾಟ ಮತ್ತೊಂದು ಹಂತಕ್ಕೆ ದಾಪುಗಾಲಿಟ್ಟಿದ್ದು, ಶೀಘ್ರವೇ 15 ಜನ ಕಾಂಗ್ರೆಸ್ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಸ್ನೇಹಿತರು, ಆಪ್ತ ಶಾಸಕರೆಲ್ಲರೂ ಸೇರಿ ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ. ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸಕ್ಕೆ ಬರುವುದಿಲ್ಲ. ವಿಮಾನ ಟಿಕೆಟ್ ಬುಕ್ ಮಾಡುತ್ತಿದ್ದೇವೆ, ಬುಕ್ ಆದ ಬಳಿಕ ಪ್ರವಾಸ ಕೈಗೊಳ್ಳುತ್ತೇವೆ ಎಂದು ಹೇಳಿದರು.