ಗಿಗ್ ಕಾರ್ಮಿಕರು ಕಲ್ಯಾಣಕ್ಕೆ ಸಂಸ್ಥೆಗಳಿಗೆ 5% ಸೆಸ್‌ : ಸಿಎಂ ಸಿದ್ದರಾಮಯ್ಯ

ಸಾರಾಂಶ

ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

 ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 

ಕಲ್ಯಾಣ ಮಂಡಳಿಗಾಗಿ ಅಮೆಜಾನ್, ಫ್ಲಿಪ್‌ಕಾರ್ಟ್ ಸೇರಿ ಹತ್ತಾರು ಸಂಸ್ಥೆಗಳಿಂದ ಶೇ.5 ರಷ್ಟು ಸೆಸ್ ಸಂಗ್ರಹಿಸಿ, ಅದೇ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಗಿಗ್‌ ಕಾರ್ಮಿಕರ ಕಲ್ಯಾಣಕ್ಕೆ ಬಳಸುವುದು ಮತ್ತು ಉಳಿದ ಅಗತ್ಯ ಹಣ ಸರ್ಕಾರವೇ ಭರಿಸಿ ವಿವಿಧ ಯೋಜನೆ, ಕಾರ್ಯಕ್ರಮ ರೂಪಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಭಾರತ್ ಜೋಡೋ ಯಾತ್ರೆ ಸಂದರ್ಭ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣ ಪರವಾಗಿ ಧ್ವನಿ ಎತ್ತಿದ್ದರು. ಗುರುವಾರ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಪಾಲ್ಗೊಂಡು ಸಮಗ್ರವಾಗಿ ಚರ್ಚಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ

ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ

 ಗಿಗ್ ಕಾರ್ಯಕರ್ತರು ಭಾಗಿ

ಸಭೆಗೆ ಆಗಮಿಸಲು ಗಿಗ್ ಕಾರ್ಮಿಕರ ವಲಯದ ಪರವಾಗಿ ಮೂವರು ಕಾರ್ಯಕರ್ತರಿಗೂ ಅವಕಾಶ ಒದಗಿಸಲಾಗಿತ್ತು.

ರಾಜ್ಯದವರಾದ ರಕ್ಷಿತಾ ದೇವ್, ಹೈದ್ರಾಬಾದಿನ ಶೇಖ್ ಸಲಾಹುದ್ದೀನ್, ನಿಖಿಲ್ ದೇವ್ ಭಾಗವಹಿಸಿದ್ದರು. ಮುಂದಿನ ಹಂತವಾಗಿ ಸಮಗ್ರ ಅಂಶಗಳನ್ನು ಒಳಗೊಂಡ ಮಸೂದೆ ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ.

Share this article