ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ: ''ಕೈ'' ಶಾಸಕರಿಗೆ ಡಿಕೆಶಿ ಔತಣ - ಮೂರು ತಿಂಗಳ ಮೊದಲೇ ಡಿಸಿಎಂ ಔತಣ

Published : Mar 14, 2025, 09:06 AM IST
dk shivakumar

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ಬಹುತೇಕ ಎಲ್ಲಾ ಶಾಸಕರು, ಪರಿಷತ್‌ ಸದಸ್ಯರು ಭಾಗವಹಿಸಿದ್ದರು.

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ಬಹುತೇಕ ಎಲ್ಲಾ ಶಾಸಕರು, ಪರಿಷತ್‌ ಸದಸ್ಯರು ಭಾಗವಹಿಸಿದ್ದರು. 

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರು ಹಾಗೂ ಕೆಪಿಸಿಸಿಯ ವಿವಿಧ ಪದಾಧಿಕಾರಿಗಳು ಡಿ.ಕೆ.ಶಿವಕುಮಾರ್‌ ಅವರಿಗೆ ಶುಭಾಶಯ ಕೋರಿದರು.

ಕಳೆದ ಕೆಲ ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್‌ನಲ್ಲಿ ಭೋಜನಕೂಟಗಳು ತೀವ್ರ ಸದ್ದು ಮಾಡಿದ್ದವು. ಇದೀಗ ಡಿ.ಕೆ. ಶಿವಕುಮಾರ್‌ ಅವರು ಜು.2ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಐದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳ ಮೊದಲೇ ಔತಣ ಕೂಟ ನೀಡಿದ್ದಾರೆ. ಅಧಿವೇಶನದ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು, ಪರಿಷತ್‌ ಸದಸ್ಯರು ಸುಲಭವಾಗಿ ಔತಣಕೂಟದಲ್ಲಿ ಭಾಗವಹಿಸಬಹುದು ಎಂಬ ಕಾರಣಕ್ಕೆ ಗುರುವಾರ ಔತಣ ಕೂಟ ಏರ್ಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ